LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Bellary

ನೀಟ್ ನಲ್ಲಿ 150ನೇ ರ್ಯಾಂಕ್ : ಎನ್. ಸಾಯಿ ಶ್ರಾವ್ಯಗೆ ಬಿಡಿಸಿಸಿಐನಿಂದ ಅಭಿನಂದನೆ

ಬಳ್ಳಾರಿ : ನೀಟ್ (UG)-2026 ಪರೀಕ್ಷೆಯಲ್ಲಿ 150ನೇ ್ಯಾಂಕ್ ಗಳಿಸಿರುವ ಬಳ್ಳಾರಿಯ ವಿದ್ಯಾರ್ಥಿನಿ ಎನ್. ಸಾಯಿ ಶ್ರಾವ್ಯ ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಶುಕ್ರವಾರ ಸನ್ಮಾನಿಸಿ ಅಭಿನಂದಿಸಿದೆ.

 

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ  ಕೆ. ಸಿ. ಸುರೇಶಬಾಬು ಅವರು, ಎನ್. ಸಾಯಿ ಶ್ರಾವ್ಯ ಅವರಿಗೆ ಅಭಿನಂದನೆ ಸಲ್ಲಿಸಿ, ವೈದ್ಯಕೀಯ ಶಿಕ್ಷಣದಲ್ಲಿ ಉತ್ತಮ ಸಾಧನೆಮಾಡಿ, ಜನಸೇವೆಗೆ ಅರ್ಪಣೆಗೊಳ್ಳಬೇಕು ಎಂದು ಹಾರೈಸಿದರು.

 

ಅಭಿನಂದನೆಗಳನ್ನು ಸ್ವೀಕರಿಸಿ ಮಾತನಾಡಿದ ಎನ್.‌ ಸಾಯಿ ಶ್ರಾವ್ಯ ಅವರು, ಬಿಡಿಸಿಸಿಐನಲ್ಲಿ ಅಭಿನಂದನೆಗಳನ್ನು ಸ್ವೀಕರಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಹೆಮ್ಮೆ ಅನಿಸುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.

 

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ  ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ, ಖಜಾಂಚಿಗಳಾದ ಸಿ.ಎಸ್. ಸತ್ಯನಾರಾಯಣ, ಮಾಜಿ ಅಧ್ಯಕ್ಷರಾದ ಬಿ. ಮಹಾರುದ್ರ ಗೌಡ, ಸಿ. ಶ್ರೀನಿವಾಸರಾವ್, ಡಾ. ಡಿ. ಎಲ್. ರಮೇಶ್ ಗೋಪಾಲ್, ವಿವಿಧ ಕಮಿಟಿಗಳ ಅಧ್ಯಕ್ಷರು, ವಿಶೇಷ ಆಹ್ವಾನಿತರು ಹಾಗೂ ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದು ಎನ್. ಸಾಯಿ ಶ್ರಾವ್ಯ ಅವರನ್ನು ಅಭಿನಂದಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ