LIVE TV StateNationalPoliticsCrimeEntertainmentSportsEducationFINANCE & TAXATION
Districts

ರೈಲಿನಲ್ಲಿ ಸಾಗಿಸುತ್ತಿದ್ದ 46 ಮದ್ಯದ ಬಾಟಲಿ ವಶ

ಹುಬ್ಬಳ್ಳಿ: ರೇಲ್ವೆ ಇಲಾಖೆಯ ಸತರ್ಕ್ ಕಾರ್ಯಾಚರಣೆಯಡಿಯಲ್ಲಿ ರೈಲಿನಲ್ಲಿ ಸಾಗಿಸುತ್ತಿದ್ದ 8180 ರೂ. ಮೌಲ್ಯದ ವಿವಿಧ ಬ್ರಾಂಡ್ ಗಳ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿ ವಿಭಾಗದ ಆರ್‌ಪಿಎಫ್ ತಂಡವು ಜು.೮ರಂದು ಧಾರವಾಡ - ಹುಬ್ಬಳ್ಳಿ ರೈಲು ನಿಲ್ದಾಣಗಳ ನಡುವಿನ ರೈಲು ಸಂಖ್ಯೆ 18048 ಎಕ್ಸ್. ವಾಸ್ಕೋ-ಸಾಲಿಮಾರ್‌ನಲ್ಲಿ ವಿಶೇಷ ತಪಾಸಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೇ ಪ್ರಯಾಣಿಕರು ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದರು. ಪರಿಶೀಲನೆ ಸಮಯದಲ್ಲಿ ವಿವಿಧ ಬ್ರಾಂಡ್‌ಗಳ ಒಟ್ಟು 46 ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ.



ವಶಪಡಿಸಿಕೊಂಡ ವಸ್ತುಗಳನ್ನು ಹುಬ್ಬಳ್ಳಿಯ ಆರ್‌ಪಿಎಫ್ ಪೋಸ್ಟ್ಗೆ ತರಲಾಗಿದೆ. ವಿಚಾರಣೆಗೊಳಪಡಿಸಿದ ಬಳಿಕ ಮದ್ಯದ ಬಾಟಲಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಹುಬ್ಬಳ್ಳಿಯ ಅಬಕಾರಿ ನಿರೀಕ್ಷಕರಿಗೆ ಹಸ್ತಾಂತರಿಸಲಾಯಿತು. ಅಬಕಾರಿ ಅಧಿಕಾರಿಗಳು ಈ ಸಂಬAಧ ಕರ್ನಾಟಕ ಅಬಕಾರಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಗೋವಾದಲ್ಲಿ ಮದ್ಯ ಕಡಿಮೆ ದರದಲ್ಲಿ ಲಭಿಸುತ್ತದೆ ಎನ್ನುವ ಕಾರಣಕ್ಕೆ ಕೆಲ ಪ್ರಯಾಣಿಕರು ಇದನ್ನು ದಂಧೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ರೈಲಿನಲ್ಲಿ ಬ್ಯಾಗ್ ಮತ್ತು ಇತರೆ ವಸ್ತುಗಳ ನಡುವೆ ಬಾಟಲಿಗಳನ್ನು ಸಾಗಿಸುವ ತಂತ್ರಗಾರಿಕೆಯನ್ನು ಕೆಲ ಪ್ರಯಾಣಿಕರು ರೂಢಿಸಿಕೊಂಡಿದ್ದಾರೆ. ಈ ಗುಮಾನಿಯ ಮೇರೆಗೆ ಆರ್ ಪಿ ಎಫ್ ತಂಡದವರು ಪರಿಶೀಲನೆ ನಡೆಸಿ, ಅನುಮತಿ ಮತ್ತು ಯಾವುದೇ ದಾಖಲೆ ಇಲ್ಲದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. 

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ