ಬಳ್ಳಾರಿ : ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಳ್ಳಾರಿ ಜಿಲ್ಲೆಯ ತ್ಯಾಗ ಮತ್ತು ಹೋರಾಟಗಾರರ ಕೊಡುಗೆಯನ್ನು ಸ್ಮರಿಸಿದರು. ಜೊತೆಗೆ, ಸರ್ಕಾರದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ವಾರ್ತಾ ಇಲಾಖೆಯ ಪಾತ್ರ ಮುಖ್ಯವಾದುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇಲಾಖೆಯ ವಾರ್ತಾ ಸಹಾಯಕ ವಿ.ಸಿ. ಗುರುರಾಜ್, ಪ್ರ.ದ.ಸ ನವೀನ್ ಕುಮಾರ್.ಜಿ., ಸಿಬ್ಬಂದಿಗಳಾದ ಹನುಮೇಶ್.ಹೆಚ್., ವಿಜಯ್ ಕುಮಾರ್, ಮಲ್ಲೇಶ್, ಹನುಮಂತಪ್ಪ, ರೋಜಮೀರಿ, ತಿಪ್ಪೇಸ್ವಾಮಿ ಇದ್ದರು.