LIVE TV StateNationalPoliticsCrimeEntertainmentSportsEducationFINANCE & TAXATION
Districts

ಮಹಿಳೆಯರಿಗಾಗಿ ನವ ಆಶಾ ಕಿರಣ ರೊಬೋಟಿಕ್ ಶಸ್ತ್ರಚಿಕಿತ್ಸೆ : ಡಾ. ಸಭಿಹಾ

ಬೆಂಗಳೂರು: ಕಳೆದ 7 ವರ್ಷಗಳಿಂದ ಅಸಾಮಾನ್ಯ ಗರ್ಭಾಶಯ ರಕ್ತಸ್ರಾವ ಮತ್ತು ಪೆಲ್ವಿಕ್ ನೋವಿನಿಂದ ಬಳಲುತ್ತಿದ್ದ ಆಂಧ್ರ ಮೂಲದ 41 ವರ್ಷದ ಮಹಿಳೆಗೆ ಇಲ್ಲಿನ ವೈಟ್ ಫೀಲ್ಡ್ ನಲ್ಲಿರುವ ಮೆಡಿಕವರ್ ಆಸ್ಪತ್ರೆಯ ಹಿರಿಯ ಸ್ತ್ರೀರೋಗ ತಜ್ಞೆ ಡಾ. ಸಭಿಹಾ ಅಂಜುಮ್ ಅವರಿಂದ ನಿಟ್ಟುಸಿರು ಬಿಡುವಂತಾಗಿದೆ.

 

ಎರಡು ಬಾರಿ ಸೀಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಈಗಾಗಲೇ ಎರಡು ಬಾರಿ ಡಿ ಮತ್ತು ಸಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಆದರೂ ಯಾವುದೇ ಪರಿಹಾರ ದೊರಕಿರಲಿಲ್ಲ. ಪರಿಸ್ಥಿತಿ ಹಂತ ಹಂತವಾಗಿ ಗಂಭೀರವಾಗತೊಡಗಿತು. ಇದರಿಂದ ಗರ್ಭಾಶಯದ ಕ್ಯಾನ್ಸರ್ ಶಂಕೆ ಏರಿತು. ಮೆಡಿಕವರ್‌ನಲ್ಲಿ ಹೆಚ್ಚಿನ ತಪಾಸಣೆಯ ಬಳಿಕ, ಸೀಸೇರಿಯನ್‌ನಿಂದ ಉಂಟಾದ ಗಟ್ಟಿಯಾದ ಅಂಟಿಕೆಗಳಿAದ ಗರ್ಭಾಶಯ ಸುತ್ತಲಿನ ಅಂಗಗಳಿಗೆ ಬೆಸೆದುಕೊಂಡಿರುವುದು ತಿಳಿಯಿತು. ಸಾಮಾನ್ಯ ಶಸ್ತ್ರಚಿಕಿತ್ಸೆಯಲ್ಲಿ ಇದು ಅಪಾಯಕಾರಿಯಾಗಿತ್ತು.



ಡಾ. ಸಭಿಹಾ ಅವರು ರೊಬೋಟಿಕ್ ತಂತ್ರಜ್ಞಾನ ಬಳಸಿ ರೊಬೋಟಿಕ್ ಹಿಸ್ಟರೆಕ್ಟಮಿ (ಗರ್ಭಾಶಯ ತೆಗೆದುಹಾಕುವ ಶಸ್ತ್ರಚಿಕಿತ್ಸೆ) ನಡೆಸಿದರು. ಶಸ್ತ್ರಚಿಕಿತ್ಸೆಯಲ್ಲಿ ಅವರು ಅಂಟಿಕೆಗಳನ್ನು ಒಂದೊAದಾಗಿ ಬೇರ್ಪಡಿಸಿ, ಗರ್ಭಾಶಯವನ್ನು ಸುರಕ್ಷಿತವಾಗಿ ತೆಗೆದುಹಾಕಿದರು. ಇಂತಹ ಗಂಭೀರ ಪ್ರಕರಣಗಳಲ್ಲಿ ರೊಬೋಟಿಕ್ ತಂತ್ರಜ್ಞಾನ ನಿಖರ ದೃಷ್ಟಿ ಮತ್ತು ನಿಖರ ನಿಯಂತ್ರಣ ಒದಗಿಸುತ್ತದೆ. ಇದು ರಕ್ತಸ್ರಾವ ಕಡಿಮೆ ಮಾಡುತ್ತದೆ, ನೋವು ಕಡಿಮೆ ಆಗುತ್ತದೆ ಮತ್ತು ಗುಣಮುಖತೆ ವೇಗವಾಗಿ ನಡೆಯುತ್ತದೆ ಎಂದು ಡಾ. ಸಭಿಹಾ ತಿಳಿಸಿದ್ದಾರೆ.

 

ಈ ಶಸ್ತ್ರಚಿಕಿತ್ಸೆ ನಂತರ ರೋಗಿಗೆ ಯಾವುದೇ ತೊಂದರೆ ಆಗದೆ, ೨೪ ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಲಾಯಿತು. ಈ ಪ್ರಕರಣವು ಹಳೆಯ ಸೀಸೇರಿಯನ್ ಮಾಡಿದ ಮಹಿಳೆಯರಲ್ಲಿ, ಗರ್ಭಾಶಯ ಸಂಬಂಧಿತ ಸಮಸ್ಯೆಗಳಿಗೆ ರೊಬೋಟಿಕ್ ಶಸ್ತ್ರಚಿಕಿತ್ಸೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ