LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಎಐಸಿಸಿ ಅಧ್ಯಕ್ಷ ಖರ್ಗೆ ಹುಟ್ಟು ಹಬ್ಬದಾಚರಣೆ

ಬಳ್ಳಾರಿ: ರಾಜ್ಯಸಭಾ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83೩ನೇ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಬಳ್ಳಾರಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

 

ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುಮಾಯೂನ್ ಖಾನ್ ಸಮ್ಮುಖದಲ್ಲಿ ನಡೆದ ಈ ಹುಟ್ಟು ಹಬ್ಬದಾಚರಣೆಯಲ್ಲಿ ಖರ್ಗೆ ಅವರ ರಾಜಕೀಯ ಹೋರಾಟಗಳನ್ನು ಮೆಲುಕು ಹಾಕಲಾಯಿತು. ಅಲ್ಲದೇ ಅವರು ಪಕ್ಷಕ್ಕಾಗಿ ಶ್ರಮಿಸುವ ಪರಿ ಎಲ್ಲ ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಲಿ. ಅವರ ಆಯುಷ್ಯ ವೃದ್ಧಿಸಲಿ ಎಂದು ನಾಯಕರು ಈ ಸಂದರ್ಭದಲ್ಲಿ ಹೇಳಿದರು.



ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಬೋಯಪಾಟಿ ವಿಷ್ಣುವರ್ಧನ್, ಡಿಸಿಸಿ ಉಪಾಧ್ಯಕ್ಷ ಕೆ. ಶ್ರೀನಿವಾಸಲು, ಬಳ್ಳಾರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಂ.ಎಸ್. ಮಂಜುಳಾ, ಕಾಂಗ್ರೆಸ್ ಹಿರಿಯ ನಾಯಕರಾದ ಎಲ್. ಮಾರಣ್ಣ, ಪಾಲಿಕೆ ಸದಸ್ಯರಾದ ಪ್ಯಾರಂ ವಿವೇಕ್, ಆಸಿಫ್, ಗೋವಿಂದರಾಜುಲು, ಬಳ್ಳಾರಿ ಜಿಲ್ಲಾ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಅಲಿವೇಲು ಸುರೇಶ್, ಬಳ್ಳಾರಿ ಜಿಲ್ಲಾ ಸೋಶಿಯಲ್ ಮೀಡಿಯಾ ಅಧ್ಯಕ್ಷ ಅಫಾಕ್ ಅಹಮದ್, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಎರುಕುಲ ಸ್ವಾಮಿ, ಗ್ಯಾರೆಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಗೋನಾಳ್ ನಾಗಭೂಷಣ ಗೌಡ, ಡಿಸಿಸಿ ಕಾರ್ಯದರ್ಶಿ ವೀರನಗೌಡ, ಬಳ್ಳಾರಿ ಜಿಲ್ಲಾ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರು ಸಂತೋಷ್ ಸ್ವಾಮಿ, ಸಂಗನಕಲ್ಲು ವಿಜಯ್ ಕುಮಾರ್, ರಾಜೇಶ್, ಶ್ರೀಕಾಂತ್, ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಇದ್ದರು. 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ