ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ರಿ.), ಬೆಂಗಳೂರು, ಬಳ್ಳಾರಿ ಜಿಲ್ಲಾ ಘಟಕದ 2026–2031ನೇ ಐದು ವರ್ಷಗಳ ಅವಧಿಗೆ ಜಿಲ್ಲಾ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಅಂಬರೀಶ, ಪ್ರಧಾನ ಕಾರ್ಯದರ್ಶಿಯಾಗಿ ಮಾರುತಿ ಗೊಂದಿ ಹಾಗೂ ಖಜಾಂಚಿಯಾಗಿ ಯೋಗಾನಂದ ಪಾಟೀಲ್ ಅವರು ಜಯಗಳಿಸಿದ್ದಾರೆ.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ವೀರೇಶ್ ಹಾಗೂ ಅಂಬರೀಶ, ಪ್ರಧಾನ ಕಾ
ರ್ಯದರ್ಶಿ ಸ್ಥಾನಕ್ಕೆ ರಾಜಾಪುರ ವೀರೇಶ್ ಹಾಗೂ ಮಾರುತಿ ಗೊಂದಿ ಮತ್ತು ಖಜಾಂಚಿ ಸ್ಥಾನಕ್ಕೆ ಲಿಖಿತ್ ಕುಮಾರ್ ಬಿ. ಹಾಗೂ ಯೋಗಾನಂದ ಪಾಟೀಲ್ ಅವರು ಸ್ಪರ್ಧಿಸಿದ್ದರು.
ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ನಡೆದ ಮತ ಎಣಿಕೆಯಲ್ಲಿ ಅಂಬರೀಶ ಅವರು ಜಿಲ್ಲಾಧ್ಯಕ್ಷರಾಗಿ, ಮಾರುತಿ ಗೊಂದಿ ಅವರು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಯೋಗಾನಂದ ಪಾಟೀಲ್ ಅವರು ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗಿರೀಶ್ ಅವರು ತಿಳಿಸಿದ್ದಾರೆ.
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಜಿಲ್ಲೆಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಶಿಕ್ಷಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸಿ, ಶಿಕ್ಷಕರ ಹಕ್ಕುಗಳು ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.