ಕೂಡ್ಲಿಗಿ: ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರನ್ನು ಭೇಟಿಯಾದ ಮೊಳಕಾಲ್ಮುರು ತಾಲೂಕಿನ ಸಿದ್ದಯ್ಯನಕೋಟೆ ಶ್ರೀಮಠದ ಪದಾಧಿಕಾರಿಗಳು, ಶ್ರೀಮಠದ ಆವರಣದಲ್ಲಿ ಸಾಂಸ್ಕೃತಿಕ ರಂಗಮಂದಿರ ನಿರ್ಮಿಸುವಂತೆ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್, ಸಿದ್ದಯ್ಯನಕೋಟೆಯ ಕಾಯಕಯೋಗಿ ಪರಮಪೂಜ್ಯ ಶ್ರೀ ಬಸವಲಿಂಗ ಮಹಾಸ್ವಾಮಿಗಳು ಗಡಿ ಗ್ರಾಮಗಳಲ್ಲಿನ ಅನೇಕ ಬಡ ಕುಟುಂಬಗಳ ವಿದ್ಯಾರ್ಥಿಗಳನ್ನು ಶಿಕ್ಷಣವಂತರನ್ನಾಗಿ ಮಾಡುವ ಮೂಲಕ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ. ಇಂತಹ ಶ್ರೀಗಳ ಕಾರ್ಯಕ್ಕೆ ಸಹಕಾರ ನೀಡುವ ನಿಟ್ಟಿನಲ್ಲಿ ತಮ್ಮ ಅನುದಾನದಲ್ಲಿ ಸಾಂಸ್ಕೃತಿಕ ರಂಗಮಂದಿರ ನಿರ್ಮಿಸಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್ ಹಾಗೂ ಸಮಾಜ ಸೇವಕ ಕೆ.ಪಿ. ಪಂಪಾಪತಿ, ಸಂಗೀತ ಶಿಕ್ಷಕ ತುಮಕೂರ್ಲಹಳ್ಳಿ ಕೆ. ಓ. ಶಿವಣ್ಣ ಉಪಸ್ಥಿತರಿದ್ದರು.