LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕಾಂಗ್ರೆಸ್ ಜಿಲ್ಲಾ ಪದಾಧಿಕಾರಿಗಳ ನೇಮಕ

ಕೊಪ್ಪಳ: ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ, ಹಾಲಿ ಸದಸ್ಯ, ಹಿರಿಯ ಕಾಂಗ್ರೆಸ್ಸಿಗ ಅಕ್ಬರ್ ಪಾಶಾ ಪಲ್ಟನ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಡಿಸಿಸಿ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪೂರ ಅವರು ಆದೇಶ ನೀಡಿದರು.

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಡಿಸಿಸಿ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪೂರ ಅವರು ಆದೇಶ ನೀಡಿದರು.

ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡುವವರನ್ನು ಗುರುತಿಸಿ ಹುದ್ದೆಗಳನ್ನು ನೀಡುತ್ತಿದ್ದು, ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ಅವರೂ ಸಹ ಸಕ್ರಿಯ ಕಾರ್ಯಕರ್ತರಾಗಿದ್ದು, ಮೋಚಿ ಸಮುದಾಯಕ್ಕೂ ಒಂದು ಅಧ್ಯತೆ ನೀಡಿ ಅವರ ನೇಮಕ ಮಾಡಿರುವದಾಗಿ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಹೇಳಿದರು.



ಈ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು, ನೂತನ ಕಾರ್ಯದರ್ಶಿಗಳಿಗೆ ಶುಭ ಕೋರಿ ಪಕ್ಷ ಸಂಘಟಿಸುವಂತೆ ಕರೆ ನೀಡಿದರು. ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಅವರು ಮಾತನಾಡಿ, ಮಹಿಳೆರಿಗೆ ಡಿಸಿಸಿಯಲ್ಲಿ ಮೊದಲ ಬಾರಿಗೆ ಹೆಚ್ಚಿನ ಅವಕಾಶ ನೀಡಿದ್ದು ಸಂತಸ ತಂದಿದೆ, ಮುಂದಿನ ದಿನಗಳಲ್ಲಿ ಜಿಲ್ಲೆಯ ಮಹಿಳಾ ಶಕ್ತಿಯನ್ನು ಒಗ್ಗೂಡಿಸುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್. ಬಿ. ನಾಗರಳ್ಳಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಮುಖಂಡರುಗಳಾದ ಸುರೇಶ ದಾಸರಡ್ಡಿ, ಅಕ್ಬರ್ ಪಾಶಾ ಪಲ್ಟನ್, ಸುಮಂಗಲಾ ನಾಯಕ, ಸೌಭಾಗ್ಯ ಗೊರವರ, ಅನಿತಾ ಅಳ್ಳಮ್ಮನವರ, ನವೋದಯ ವಿರುಪಾಕ್ಷಪ್ಪ ಇತರರು ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ