LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬೈಕ್ ಕಳ್ಳನ ಬಂಧನ : 24 ಬೈಕ್ ವಶ

ಮುನಿರಾಬಾದ್ : ಕೊಪ್ಪಳ  ಸೇರಿದಂತೆ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮುನಿರಾಬಾದ್ ಠಾಣೆ ಪೋಲಿಸರು, ಆತನಿಂದ 24 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಗಸ್ತು ವೇಳೆ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಗಂಗಾವತಿ ತಾಲೂಕಿನ ಉಡಮಕಲ್ ಗ್ರಾಮದ ಶರಣಪ್ಪ ತಂದೆ ಇಂದ್ರೇಪ್ಪ ಮರಳಿ (26) ಬಂಧಿತ ಆರೋಪಿ.

ಗಿಣಿಗೇರಿ ಬಸಾಪುರ ಗ್ರಾಮದ ಬಾಳಪ್ಪ ಹನುಮಂತಪ್ಪ ಸಿಂಧೋಗಿ ಅವರು ನೀಡಿದ ಬೈಕ್ ಕಳ್ಳತನದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೋಲೀಸರು, ಅಂದಾಜು 16 ಲಕ್ಷ ಮೌಲ್ಯದ ವಿವಿಧ ಕಂಪನಿಯ 24 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.



ಪ್ರಕರಣದ ಪತ್ತೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಆರ್ ಹೇಮಂತ್ ಕುಮಾರ್  ಅವರ ಮಾರ್ಗದರ್ಶನದಲ್ಲಿ ಡಿಎಸ್ಪಿ ಮುತ್ತಣ್ಣ ಸರವಗೋಳ ಸಿಪಿಐ ಸುರೇಶ್ ಚೌವ್ಹಾಣ್ ನೇತೃತ್ವದಲ್ಲಿ ಪಿಎಸ್ಐ ಸುನಿಲ್ ಎಚ್, ಹಾಗೂ ಕ್ರೈಂ ಪಿಎಸ್ಐ ಮಲ್ಲಪ್ಪ, ಇನಾಯತ್, ಮಹೇಶ್ ಸಜ್ಜನ್, ರಾಜಶೇಖರ್,ಈರೇಶ, ಶಿವಶಂಕರ್, ಮಹಾಂತೇಶ,ವಾಹನ ಚಾಲಕರಾದ ವೆಂಕಟೇಶ್, ಚಂದ್ರಶೇಖರ್, ಶರಣಪ್ಪ, ಹೆಡ್  ಕಾನ್‍ಸ್ಟೆಬಲ್ ಹಾಗೂ ಪಿಸಿ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.

ಯಶಸ್ವಿ ಕಾರ್ಯಾಚರಣೆ ನಡೆಸಿದ ಪೋಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪೋಲೀಸ್ ಅಧೀಕ್ಷಕರು ಡಾ.ರಾಮ್, ಎಲ್ ಅರೆ ಸಿದ್ದಿ ಪ್ರಶಂಸೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ