LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ

ಆರಂಭಿಕ ಹಂತದಲ್ಲೇ ರೋಗ ಪತ್ತೆಹಚ್ಚಿ ಚಿಕಿತ್ಸೆ ಪಡೆಯಲು ಡಾ. ಶ್ರೀಲಾಸ್ಯ ಕಾಕರ್ಲ ಸಲಹೆ

ಬಳ್ಳಾರಿ: ಮೆಡಿಕಲ್ ಸರ್ವಿಸ್ ಸೆಂಟರ್ (MSC) ಹಾಗೂ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ವತಿಯಿಂದ ಬಳ್ಳಾರಿ ಇನ್‌ಸ್ಟಿಟ್ಯೂಟ್‌ನ ಬಿ.ಎಡ್. ಮತ್ತು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಗರ್ಭಕಂಠದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ಪ್ರಸೂತಿ ತಜ್ಞೆ ಡಾ. ಶ್ರೀಲಾಸ್ಯ ಕಾಕರ್ಲ ಮಾತನಾಡಿ, ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಮಹಿಳೆಯರಲ್ಲಿ ಕಂಡುಬರುವ ಪ್ರಮುಖ ಕ್ಯಾನ್ಸರ್‌ಗಳಾಗಿವೆ. ಈ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲಿನ ಗಂಭೀರ ಪರಿಣಾಮಗಳನ್ನು ತಡೆಗಟ್ಟಲು ಸಾಧ್ಯವಿದೆ ಎಂದು ತಿಳಿಸಿದರು.

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್‌ಪಿವಿ (HPV) ಲಸಿಕೆ ಲಭ್ಯವಿದ್ದು, ಅರ್ಹ ವಯಸ್ಸಿನವರು ವೈದ್ಯರ ಸಲಹೆಯಂತೆ ಲಸಿಕೆ ಪಡೆಯಬೇಕು. ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಅಗತ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ತನಗಳಲ್ಲಿ ಅಸಹಜ ಬದಲಾವಣೆಗಳು ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಬೇಕು. ವೈಯಕ್ತಿಕ ಸ್ವಚ್ಛತೆ, ವಿಶೇಷವಾಗಿ ಮುಟ್ಟಿನ ಸಂದರ್ಭದಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದು ಮುಖ್ಯ. ಆರೋಗ್ಯಕರ ಜೀವನಶೈಲಿಯ ಭಾಗವಾಗಿ ನಿಯಮಿತ ವ್ಯಾಯಾಮ, ಪೌಷ್ಟಿಕಾಂಶಯುಕ್ತ ಆಹಾರ ಹಾಗೂ ಹಸಿರು ತರಕಾರಿಗಳ ಸೇವನೆಗೆ ಆದ್ಯತೆ ನೀಡಬೇಕು. ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿದರು.

ಮಹಿಳೆಯರಲ್ಲಿ ಕ್ಯಾನ್ಸರ್ ಕುರಿತು ಇರುವ ಭಯ ಮತ್ತು ತಪ್ಪು ಕಲ್ಪನೆಗಳನ್ನು ದೂರ ಮಾಡಿ, ಆರೋಗ್ಯ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆರಂಭಿಕ ಲಕ್ಷಣಗಳನ್ನು ಗುರುತಿಸಿ ಸೂಕ್ತ ಸಮಯದಲ್ಲಿ ವೈದ್ಯಕೀಯ ನೆರವು ಪಡೆಯುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಳ್ಳಾರಿ ಇನ್‌ಸ್ಟಿಟ್ಯೂಟ್ ಕಾಲೇಜಿನ ಪ್ರಾಂಶುಪಾಲ ಎಚ್. ವೀರಭದ್ರಪ್ಪ, ಉಪನ್ಯಾಸಕರಾದ ಮಂಗಳಗೌರಿ ಮತ್ತು ಅಶ್ವಿನಿ, ಮೆಡಿಕಲ್ ಸರ್ವಿಸ್ ಸೆಂಟರ್‌ನ ಡಾ. ದಿವ್ಯ ಹಾಗೂ ಡಾ. ಉಪೇಂದ್ರ ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷೆ ಈಶ್ವರಿ ಉಪಸ್ಥಿತರಿದ್ದರು.

 

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ