LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಸೌಜನ್ಯ ಮನೆಗೆ ಬಿ.ವೈ. ವಿಜಯೇಂದ್ರ ಭೇಟಿ

ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಪ್ರೀತಮ್ ಗೌಡ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಶಾಸಕರಾದ ಗುರುರಾಜ್ ಗಂಟಿಹೊಳೆ ಮತ್ತು ಸಿಮೆಂಟ್ ಮಂಜುನಾಥ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ಗೌಂಡ ಮತ್ತು ಶರಣು ತಳ್ಳಿಕೇರಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡಂಜಿ ಅವರು ಸೌಜನ್ಯ ಅವರ ಮನೆಗೆ ಭೇಟಿ ಕೊಟ್ಟರು.



ನಂತರ ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ, ಸೌಜನ್ಯರ ಕೊಲೆ ವಿಚಾರವಾಗಿ ಅವರ ಕುಟುಂಬ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅಲ್ಲಿನ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಿದೆ ಎಂದು ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಸೌಜನ್ಯ ಅವರ ತಾಯಿ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಇಂದು ಬೆಳಿಗ್ಗೆ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರ ಜೊತೆ ಮಾತನಾಡಿದ್ದೆ. ಅಲ್ಲದೇ ಇಲ್ಲಿಗೆ ಬರುವ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಸಮಾವೇಶ ಮುಗಿದ ಬಳಿಕ ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.



ನಾವು ನಿಮ್ಮ ಜೊತೆ ಸಂಪೂರ್ಣವಾಗಿ ಇದ್ದೇವೆ ಎಂದು ತಿಳಿಸಿದ್ದಾಗಿ ಹೇಳಿದರು. ಸೌಜನ್ಯರ ತಾಯಿ, ಮಗಳ ಸಾವಿನ ನೋವಿನಿಂದ ಇನ್ನೂ ಹೊರಬಂದಿಲ್ಲ ಎಂದು ಅವರು ತಿಳಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ