LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕೌಶಲ್ಯಾಭಿವೃದ್ಧಿಗೆ ಕೈಗಾರಿಗೆಗಳ ಸಹಭಾಗಿತ್ವ ಇರಲಿ

ಮೈನಿಂಗ್ ಮತ್ತು ಸ್ಟೀಲ್ ಇಂಡಸ್ಟ್ರೀಸ್ ಹಾಗೂ ಪಾಲುದಾರರ ಜೊತೆ ಸಮಾಲೋಚನಾ ಸಭೆಯಲ್ಲಿ ಡಾ.ಇ.ವಿ ರಮಣ ರೆಡ್ಡಿ ಸೂಚನೆ




ಬಳ್ಳಾರಿ : ಈ ಭಾಗದ ಕೈಗಾರಿಕೆ ವಲಯಗಳಲ್ಲಿ ಉದ್ಯೋಗ ಸೃಷ್ಟಿಸುವುದರ ಜೊತೆಗೆ ಯುವ ಸಮುದಾಯದಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸಬೇಕು. ಇದಕ್ಕೆ ಕೈಗಾರಿಕೆಗಳೂ ಸಹ ಕೈಜೋಡಿಸಬೇಕು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಪ್ರಾಧಿಕಾರದ ಅಧ್ಯಕ್ಷ ಡಾ.ಇ.ವಿ ರಮಣ ರೆಡ್ಡಿ ಅವರು ಹೇಳಿದರು.

             ಸಂಡೂರು ತಾಲ್ಲೂಕಿನಲ್ಲಿ ಸ್ಕಿಲ್ ಪಾರ್ಕ್/ಅಕಾಡೆಮಿ ಸ್ಥಾಪಿಸುವ ಸಂಬಂಧ ಮೈನಿಂಗ್ ಮತ್ತು ಸ್ಟೀಲ್ ಇಂಡಸ್ಟ್ರೀಸ್ ಹಾಗೂ ಪಾಲುದಾರರ ಜೊತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.



          ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ನಿಟ್ಟಿನಲ್ಲಿ ಕೈಗಾರಿಕೆ-ಪಾಲುದಾರರೊಂದಿಗೆ ಸಮಾಲೋಚನಾ ಸಭೆ ಆಯೋಜಿಸಲಾಗಿದ್ದು, ಕೈಗಾರಿಕೆಗಳು ಮತ್ತು ಪಾಲುದಾರರ ನಡುವಿನ ಅಂತರವನ್ನು ಕಡಿಮೆ ಮಾಡಲು ಹಾಗೂ ಉದ್ಯೋಗ ಕ್ಷೇತ್ರದಲ್ಲಿನ ಬೇಡಿಕೆಗಳನ್ನು ಪೂರೈಸಲು ಸಹಯೋಗ, ಸಹಭಾಗಿತ್ವ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಬೇಕಿದೆ ಎಂದು ತಿಳಿಸಿದರು.

          ಪ್ರಸ್ತುತದಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಪಟ್ಟಿಗಳಿಗೆ ಸೀಮಿತವಾಗಿದ್ದಾರೆ. ಬದಲಾಗಿ ಅವರಿಗೆ ಕೌಶಲ್ಯತೆ ಆಧಾರಿತ ಶಿಕ್ಷಣ ಮೌಲ್ಯವು ನೀಡಬೇಕಿದೆ. ಹಾಗಾಗಿ ಇದಕ್ಕೆ ಕೈಗಾರಿಕೆಗಳ ಸಹಭಾಗಿತ್ವವೂ ಅವಶ್ಯಕತೆ ಇದೆ ಎಂದು ಅಭಿಪ್ರಾಯ ಪಟ್ಟರು.

          ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕಾ ವಲಯಗಳು ಹೆಚ್ಚಾಗಿದ್ದು, ಉದ್ಯೋಗದಾತರು ಕೌಶಲ್ಯ ಶಿಕ್ಷಣ ಅಳವಡಿಸಬೇಕು. ಜೊತೆಗೆ ಸುರಕ್ಷತೆ ಮತ್ತು ದಕ್ಷತೆಗೆ ಆದ್ಯತೆ ನೀಡಬೇಕು. ಇದಕ್ಕೆ ಬೇಕಾದ ಎಲ್ಲಾ ಅಗತ್ಯ ಸಹಕಾರ ಜಿಲ್ಲಾಡಳಿತ ನೀಡಲಿದೆ ಎಂದು ಹೇಳಿದರು.



          ಇದೇ ವೇಳೆ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾರ್ಖಾನೆಗಳ ವ್ಯವಸ್ಥಾಪಕರು ಮತ್ತು ಪಾಲುದಾರರು,  ಈ ಭಾಗದ ಯುವಜನತೆಯು ಕೌಶಲ್ಯಾಧಾರಿತ ಶಿಕ್ಷಣ ಹೆಚ್ಚು ಅಳವಡಿಸಿಕೊಳ್ಳಬೇಕಿದೆ ಎಂದು ಅನಿಸಿಕೆ ಹಾಗೂ ಅಭಿಪ್ರಾಯ ಹಂಚಿಕೊAಡರು.

          ಈ ಸಂದರ್ಭದಲ್ಲಿ  ಬೆಂಗಳೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಡಾ.ದಿನೇಶ್ ಕುಮಾರ್ ವೈ.ಕೆ., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ ಸೇರಿದಂತೆ ಜಿಲ್ಲೆಯ ವಿವಿಧ ಮೈನಿಂಗ್ ಮತ್ತು ಸ್ಟೀಲ್ ಕಾರ್ಖಾನೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ