LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್‌ ಬಣದಿಂದ ತೆರೆಮರೆ ತಂತ್ರಗಾರಿಕೆ

ಬೆಂಗಳೂರು :  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯೂರೋಪ್ ಪ್ರವಾಸ ತೆರಳಿದ್ದು, ಇದರ ಬೆನ್ನಲ್ಲೇ ಸಿಎಂ ಕುರ್ಚಿಗಾಗಿ ಜಟಾಪಟಿ ನಡೆಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ಬಣ ತೆರೆ ಮರೆಯಲ್ಲಿ ತಂತ್ರಗಾರಿಕೆಯಲ್ಲಿ ತೊಡಗಿದೆ.

ಉಭಯ ನಾಯಕರ ಆಪ್ತರು ಪರಸ್ಪರ ಟೀಕೆಯಲ್ಲಿ ತೊಡಗದಂತೆ ನಿರ್ಧಾರ ಕೈಗೊಂಡಿರುವಂತಹ ವಾತಾವರಣ ನಿರ್ಮಾಣವಾಗಿದೆ. ಆದರೂ, ಒಳಗೊಳಗೆ ರಾಜಕೀಯ ತಂತ್ರ ರೂಪಿಸುತ್ತಿರುವುದಾಗಿ ತಿಳಿದು ಬಂದಿದೆ.

ಜನವರಿ 9 ರಂದು ರಾಹುಲ್ ಗಾಂಧಿ ವಾಪಸ್ಸಾಗಲಿದ್ದು, ನಂತರ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಎರಡೂ ಬಣಗಳು ಶಸ್ತ್ರ ಸಜ್ಜಿತವಾಗುತ್ತಿವೆ.

ಈ ನಡುವೆ ಸಿದ್ದರಾಮಯ್ಯ ಅವರ ಆಪ್ತ ಬಳಗ ರಾಹುಲ್ ಗಾಂಧಿ ಅವರು ಸಂಪುಟ ಪುನಾರಚನೆಗೆ ಸಹಮತಿ ನೀಡುತ್ತಾರೆಂಬ ನಿರೀಕ್ಷೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕಾಗಿಯೂ ಲಾಬಿ ನಡೆಸುತ್ತಿದೆ.

ಸಲೀಂ ಅಹ್ಮದ್ ಹಾಗೂ ಜೇವರ್ಗಿ ಶಾಸಕರಾದ ಅಜಯ್ ಧರ್ಮಸಿಂಗ್ ಸೇರಿದಂತೆ ಹಲವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು, ಮಕರ ಸಂಕ್ರಾಂತಿಯ ನಂತರ ಸಚಿವ ಸಂಪುಟ ಪುನಾರಚನೆ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಜನವರಿ 6 ರಂದು ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ್ ಅರಸ್ ಅವರ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆಯನ್ನು ಮುರಿಯಲಿದ್ದಾರೆ. ಅವರ ಬೆಂಬಲಿಗರು ಈ ಸಂದರ್ಭವನ್ನು ಅದ್ಧೂರಿಯಾಗಿ ಆಚರಿಸಲು ಸಜ್ಜಾಗುತ್ತಿದ್ದಾರೆ.

ಯುವ ಅಹಿಂದ ಮುಖಂಡರು ಬೆಂಗಳೂರಿನಲ್ಲಿ 10,000 ಕ್ಕೂ ಹೆಚ್ಚು ಜನರಿಗೆ ಔತಣಕೂಟವನ್ನು ಆಯೋಜಿಸಲು ಸನ್ನದ್ಧರಾಗಿದ್ದಾರೆ.  ಇದರಲ್ಲಿ ಸಿದ್ದರಾಮಯ್ಯ ಅವರ ನೆಚ್ಚಿನ ಖಾದ್ಯ 'ನಾಟಿ ಕೋಳಿ' ಸಾರನ್ನು ಮೆನುವಿನಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

ಯುವ ಅಹಿಂದ ಸದಸ್ಯರ ಈ ನಿರ್ಧಾರವನ್ನು ಹಿರಿಯ ನಾಯಕ ಮತ್ತು ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್, ಸಿದ್ದರಾಮಯ್ಯ ಆಪ್ತರು ಬೆಂಬಲಿಸಿದ್ದಾರೆಂದು ತಿಳಿದುಬಂದಿದೆ.

ಏತನ್ಮಧ್ಯೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆ ಕಡಿಮೆ ಇದೆ ಎಂದು ಸಿದ್ದು ಆಪ್ತ ಬಳಗ ನಂಬಿದೆ.

ಕಾಂಗ್ರೆಸ್ ಆಡಳಿತವಿರುವ ಮೂರು ರಾಜ್ಯಗಳಲ್ಲಿ ಹಿಂದುಳಿದ ವರ್ಗದ ನಾಯಕ ಮುಖ್ಯಮಂತ್ರಿಯಾಗಿರುವುದು ಕರ್ನಾಟಕದಲ್ಲಷ್ಟೆ. ಆದ್ದರಿಂದ ಬದಲಾವಣೆ ಅನಿವಾರ್ಯವಾದರೆ ಅಹಿಂದ ಸಮುದಾಯದ ನಾಯಕರನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೇಳಿದ್ದು, ಈ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ. ಪಾರಮೇಶ್ವರ್ ಅವರ ಹೆಸರು ಚರ್ಚೆಯಲ್ಲಿದೆ.

ಈ ಮಧ್ಯೆ, ತಾನೂ ಹಿಂದುಳಿದ ವರ್ಗಕ್ಕೆ ಸೇರಿದವನೆಂದು ಹೇಳಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರು, ತಮ್ಮ ಕೊಡುಗೆಗಳಿಗೆ ಪ್ರತಿಫಲ ನೀಡುವಂತೆ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ.

2023 ರಲ್ಲಿ ಕರ್ನಾಟಕದಲ್ಲಿ ಪಕ್ಷ ಸರ್ಕಾರ ರಚಿಸಿದಾಗ ಸಿದ್ದರಾಮಯ್ಯ ಅವರೊಂದಿಗೆ ಅಧಿಕಾರ ಹಂಚಿಕೆ ಒಪ್ಪಂದವಿತ್ತು ಎಂದು ಪುನರುಚ್ಚರಿಸುತ್ತಿದ್ದಾರೆ. ರಾಹುಲ್ ವಿದೇಶದಿಂದ ಹಿಂದಿರುಗಿದ ನಂತರ ಡಿಕೆ.ಶಿವಕುಮಾರ್ ಅವರ ಬೆಂಬಲಿಗರು ದೆಹಲಿಗೆ ತೆರಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ