LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಸೆ.14 ರಂದು ಬೈಕ್ ರ್ಯಾ ಲಿ, ಸೆ.15 ರಂದು ಸೈಕಲ್ ರ್ಯಾ ಲಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝಬೇರ್ ನಿರ್ದೇಶನ

ಬಳ್ಳಾರಿ : ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯಿಂದ 10 ಅನುಭವಿ ಬೈಕ್ ರೈಡರ್ ಗಳು ಸೆ.14 ರಂದು ಬೆಳಿಗ್ಗೆ 10.30 ಕ್ಕೆ ಬಳ್ಳಾರಿಯಿಂದ ರಾಷ್ಟçಧ್ವಜದೊಂದಿಗೆ ಬೆಂಗಳೂರಿಗೆ ತೆರಳಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು  ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವ ವಿವಿಧ ಕಾರ್ಯಕ್ರಮಗಳನ್ನು ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ಇದೇ ಸೆ.15 ರಂದು ನಡೆಯಲಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ನನ್ನ ಮತ ನನ್ನ ಹಕ್ಕು” ಎಂಬ ಧ್ಯೇಯ ವಾಕ್ಯದಡಿ ಜಿಲ್ಲಾ ಮಟ್ಟದಲ್ಲಿ ಬೈಕ್ ರ‍್ಯಾಲಿ ಹಾಗೂ ಸೈಕಲ್ ರ‍್ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಎಲ್ಲಾ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.



ಬೈಕ್ ರ‍್ಯಾಲಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಬಳ್ಳಾರಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಶಾಸಕರು ಚಾಲನೆ ನೀಡಲಿದ್ದಾರೆ. ಸೆ.15 ರಂದು ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಏರ್ಪಡಿಸಿರುವ ಸೈಕಲ್ ರ‍್ಯಾಲಿಗೆ ಬೆಳಿಗ್ಗೆ 08 ಗಂಟೆಗೆ ನೂತನ ಜಿಲ್ಲಾಡಳಿತ ಭವನದಿಂದ ಗಡಿಗಿ ಚೆನ್ನಪ್ಪ ವೃತ್ತದಿಂದ ಕನಕ ದುರ್ಗಮ್ಮ ದೇವಸ್ಥಾನ ಮಾರ್ಗವಾಗಿ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮಕ್ಕೆ ಮುಕ್ತಾಯಗೊಳ್ಳಲಿದೆ ಎಂದರು.ರ‍್ಯಾಲಿ ಮಾರ್ಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ, ಲಘು-ಉಪಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ವಸತಿ ಶಾಲೆಗಳ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ  ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಿವಾಸ ಗಿರಿ ಸೇರಿದಂತೆ ಡಿಡಿಪಿಐ, ಡಿಡಿಪಿಯು ಅಧಿಕಾರಿಗಳು ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ