LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ದ್ರುವ ಸರ್ಜಾ ವಿರುದ್ಧ ಆರೋಪಪಟ್ಟಿ ಸಲ್ಲಿಸದಂತೆ ಬಾಂಬೆ ಹೈಕೋರ್ಟ್‌ ಆದೇಶ

ಬೆಂಗಳೂರು : ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕನ್ನಡ ನಟ ಧ್ರುವ ಸರ್ಜಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸದಂತೆ ಮುಂಬೈ ಪೊಲೀಸರಿಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಾಲಯದ ಅನುಮತಿಯಿಲ್ಲದೇ ಆರೋಪಪಟ್ಟಿ ಸಲ್ಲಿಸುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಎ ಅಂಖದ್ ಅವರಿದ್ದ ವಿಭಾಗೀಯ ಪೀಠ ಹೇಳಿದೆ.



ಧ್ರುವ ಅವರ ಅರ್ಜಿ ಪರಿಗಣಿಸುವ ಮೊದಲು ಅವರ ಪ್ರಾಮಾಣಿಕತೆ ಸಾಬೀತಿಗಾಗಿ ೩.೧೦ ಕೋಟಿ ರೂ ನ್ಯಾಯಾಲಯಕ್ಕೆ ಠೇವಣಿ ಇಡುವಂತೆ ಕಳೆದ ತಿಂಗಳು, ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ರಾಜೇಶ್ ಎಸ್. ಪಾಟೀಲ್ ಅವರಿದ್ದ ಪೀಠ ನಿರ್ದೇಶಿಸಿತ್ತು.
ಮುಂಬೈ ಮೂಲದ ನಿರ್ಮಾಪಕ-ನಿರ್ದೇಶಕ ರಾಘವೇಂದ್ರ ಹೆಗ್ಡೆ ಅವರು ಸಲ್ಲಿಸಿದ್ದ ದೂರಿನ ಮೇರೆಗೆ ನಗರದ ಪೊಲೀಸರು ಕಳೆದ ತಿಂಗಳು ಎಫ್‌ಐಆರ್ ದಾಖಲಿಸಿದ್ದರು.


ಧ್ರುವ ಸರ್ಜಾ (ಧ್ರುವ ಕುಮಾರ್ ಎಂದೂ ಕರೆಯುತ್ತಾರೆ) ಅವರ ವಿರುದ್ಧ ಹೆಗ್ಡೆ ಅವರು ವಂಚನೆ ಮತ್ತು ಕ್ರಿಮಿನಲ್ ನಂಬಿಕೆ ದ್ರೋಹದ ಆರೋಪ ಹೊರಿಸಿದ್ದರು. 2016 ಮತ್ತು 2018 ರ ನಡುವೆ ’ದಿ ಸೋಲ್ಜರ್’ ಎಂಬ ಚಲನಚಿತ್ರದಲ್ಲಿ ನಟಿಸಲು ಧ್ರುವ ಅವರಿಗೆ 3 ಕೋಟಿ ಮುಂಗಡವಾಗಿ ನೀಡಲಾಗಿತ್ತು. ಆದರೂ ಚಿತ್ರ ಸೆಟ್ಟೇರಲಿಲ್ಲ ಮತ್ತು ಧ್ರುವ ಅವರು ಚಿತ್ರ ಪೂರ್ಣಗೊಳಿಸಲು ಅಥವಾ ಹಣ ಮರಳಿಸಲು ಮುಂದಾಗಲಿಲ್ಲ ಎಂದು ಅವರು ಆರೋಪಿಸಿದ್ದರು.



2018 ರಿಂದ ವಾರ್ಷಿಕ 18% ಬಡ್ಡಿಯೊಂದಿಗೆ, ಒಟ್ಟು ನಷ್ಟ 9 ಕೋಟಿ ರೂಗೂ ಹೆಚ್ಚಾಗಿದೆ ಎಂದು ಹೆಗ್ಡೆ ಹೇಳಿದ್ದರು.
ಸರ್ಜಾ ಅವರು 3 ಕೋಟಿ ಹಣ ಪಡೆದಿರುವುದಾಗಿ ಅವರ ಕಾನೂನು ತಂಡ ತಿಳಿಸಿದೆಯಾದರೂ ಡಿಸೆಂಬರ್ 2023ರವರೆಗೆ ಯಾವುದೇ ಕಾರ್ಯಸಾಧ್ಯವಾದ ಚಿತ್ರಕತೆಯನ್ನು ತಲುಪಿಸಿಲ್ಲ. ಜೊತೆಗೆ ನಟ ಮುಂದುವರೆಯಲು ಇಷ್ಟ ಇಲ್ಲ ಎಂಬ ಕಾರಣಕ್ಕೆ ವಿಳಂಬವಾಗಿಲ್ಲ ಎಂದು ವಾದಿಸಿತು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ