LIVE TV StateNationalPoliticsCrimeEntertainmentSportsEducationFINANCE & TAXATION
Districts Vijayanagara

“30–40 ಕಿ.ಮೀ. ಅಲೆದಾಟಕ್ಕೆ ಬ್ರೇಕ್; ಗುಡೇಕೋಟೆಯಲ್ಲೇ ಆಧಾರ್ ಸೇವೆ ಆರಂಭ”

 ಗುಡೇಕೋಟೆ: ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ಆಧಾರ್ ಸೇವಾ ಕೇಂದ್ರವನ್ನು ಪುನಃ ಸ್ಥಾಪಿಸಲಾಗಿದ್ದು, ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ನೇತ್ರಾವತಿ ತಿಳಿಸಿದರು.

 

ಗುಡೇಕೋಟೆಯಲ್ಲಿ ಆಧಾರ್ ಸೇವಾ ಕೇಂದ್ರ ಪುನರಾರಂಭಗೊಂಡ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರವನ್ನು ಮತ್ತೆ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ನಾಡಕಚೇರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

ಈ ಸಂದರ್ಭದಲ್ಲಿ ಸ್ವಾಭಿಮಾನಿ ಕನ್ನಡ ರಕ್ಷಣಾ ವೇದಿಕೆ (ಕ.ರ.ವೇ) ಅಧ್ಯಕ್ಷ ಜೆ. ಶಿವಕುಮಾರ್ ಮಾತನಾಡಿ, ಗುಡೇಕೋಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಆಧಾರ್ ಕಾರ್ಡ್ ಮಾಡಿಸಲು ಅಥವಾ ತಿದ್ದುಪಡಿ ಮಾಡಿಸಲು ಸುಮಾರು 30ರಿಂದ 40 ಕಿ.ಮೀ. ದೂರದ ಕೂಡ್ಲಿಗಿಗೆ ತೆರಳಬೇಕಾದ ಅನಿವಾರ್ಯತೆ ಇತ್ತು. ಇದರಿಂದ ಸಾರ್ವಜನಿಕರು ಹಣ ಖರ್ಚು ಮಾಡುವುದರ ಜೊತೆಗೆ ಸರತಿ ಸಾಲಿನಲ್ಲಿ ನಿಂತು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಅದರಲ್ಲೂ ಬರಗಾಲದ ಸಂಕಷ್ಟದ ಸಮಯದಲ್ಲಿ ಈ ಸಮಸ್ಯೆ ಜನರಿಗೆ ಮತ್ತಷ್ಟು ಹೊರೆಯಾಗಿತ್ತು ಎಂದರು.

ಈ ಸಮಸ್ಯೆಯನ್ನು ಮನಗಂಡು ಕನ್ನಡ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೆವು. ನಮ್ಮ ಮನವಿಗೆ ಸ್ಪಂದಿಸಿ ತ್ವರಿತವಾಗಿ ಗುಡೇಕೋಟೆಯಲ್ಲಿ ಆಧಾರ್ ಸೇವಾ ಕೇಂದ್ರ ಪುನರಾರಂಭಿಸಲು ಸಹಕರಿಸಿದ ತಹಸೀಲ್ದಾರ್ ನೇತ್ರಾವತಿ ಹಾಗೂ ಉಪತಹಸೀಲ್ದಾರ್ ಅವರಿಗೆ ಸಂಘದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಆಧಾರ್ ಸೇವಾ ಕೇಂದ್ರ ಪುನರಾರಂಭದಿಂದ ಗುಡೇಕೋಟೆ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ನಾಡಕಚೇರಿಗೆ ಕಾಂಪೌಂಡ್ ನಿರ್ಮಾಣ, ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಶಾಸಕರ ಗಮನಕ್ಕೂ ತರಲಾಗಿದ್ದು, ಶಾಸಕರು ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ನೇತ್ರಾವತಿ, ಗ್ರಾಮ ಲೆಕ್ಕಾಧಿಕಾರಿ ವೀರೇಶ್, ಕ.ರ.ವೇ ಅಧ್ಯಕ್ಷ ಜೆ. ಶಿವಕುಮಾರ್, ಸಂಘದ ಪದಾಧಿಕಾರಿಗಳಾದ ಮೋಟ್ ಪಾಲಯ್ಯ, ರಾಜಣ್ಣ, ಮಡಿವಾಳ್ ನಾಗರಾಜ್, ಜೋಡುಗೊಪ್ಪಳ ರಮೇಶ್, ಕಂಬಾರ್ ರಾಜಣ್ಣ, ಹೊನ್ನೂರು ಸ್ವಾಮಿ, ಕಸಾಪುರ ಬೊಮ್ಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ