LIVE TV StateNationalPoliticsCrimeEntertainmentSportsEducationFINANCE & TAXATION
Districts Kalabuargi

ಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿ

ಕಲಬುರಗಿ: ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನ ಆರೋಗ್ಯ ಕೇಂದ್ರವು ಕಾಲೇಜು ಸಭಾಂಗಣದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕ್ಯಾನ್ಸರ್, ಅದರ ಅಪಾಯಕಾರಿ ಅಂಶಗಳು, ತಡೆಗಟ್ಟುವಿಕೆ, ಮುಂಚಿತವಾಗಿ ಪತ್ತೆಹಚ್ಚುವಿಕೆ ಮತ್ತು ಸಮಯಕ್ಕೆ ಸರಿಯಾದ ಚಿಕಿತ್ಸೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಆರ್. ಬಿ. ಕೊಂಡಾ ಅವರು ವಹಿಸಿದ್ದರು. ಆರೋಗ್ಯ ಸಂಯೋಜಕರಾದ ಡಾ. ಶಿಲ್ಪಾ ಬಂದ್ರಾಡ್ ಅವರು ಸಭಿಕರನ್ನು ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿಯಾದ ಕಲಬುರಗಿಯ ಎಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಆಂಕೊಲಾಜಿಸ್ಟ್ ಡಾ. ಶಾಂತಲಿಂಗ ನಿಗ್ಗುಡಗಿ ಅವರನ್ನು ಪರಿಚಯಿಸಿದರು. ಪ್ರಾಂಶುಪಾಲರಾದ ಡಾ. ಆರ್. ಬಿ. ಕೊಂಡಾ ಅವರು ಡಾ. ಶಾಂತಲಿAಗ ನಿಗುಡಗಿ ಅವರನ್ನು ಸನ್ಮಾನಿಸಿದರು.

news_1789838930_0_159.webp

 

ಡಾ. ಶಾಂತಲಿಂಗ ನಿಗ್ಗುಡಗಿ ಅವರು ಕ್ಯಾನ್ಸರ್ನ ವಿವಿಧ ಅಂಶಗಳ ಕುರಿತು ಮಾಹಿತಿಪೂರ್ಣ ಮತ್ತು ಪ್ರಬುದ್ಧ ಉಪನ್ಯಾಸ ನೀಡಿದರು. ಸಾಮಾನ್ಯ ಕ್ಯಾನ್ಸರ್ ವಿಧಗಳು, ಅಪಾಯಕಾರಿ ಅಂಶಗಳು, ಆರಂಭಿಕ ಲಕ್ಷಣಗಳು, ತಡೆಗಟ್ಟುವ ಕ್ರಮಗಳು, ತಪಾಸಣೆ ಮತ್ತು ಲಭ್ಯವಿರುವ ಚಿಕಿತ್ಸಾ ಆಯ್ಕೆಗಳ ಬಗ್ಗೆ ಅವರು ವಿವರಿಸಿದರು. ಮುಂಚಿತವಾಗಿ ಪತ್ತೆಹಚ್ಚುವಿಕೆಯ ಮಹತ್ವ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಅಗತ್ಯತೆಯನ್ನು ಅವರು ಒತ್ತಿ ಹೇಳಿದರು. ಈ ಸಂವಾದಾತ್ಮಕ ಅವಧಿಯಲ್ಲಿ ವಿದ್ಯಾರ್ಥಿಗಳು ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದ ತಮ್ಮ ಸಂದೇಹಗಳನ್ನು ನಿವಾರಿಸಿಕೊಳ್ಳಲು ಅವಕಾಶ ಸಿಕ್ಕಿತು.

ಈ ಕಾರ್ಯಕ್ರಮವನ್ನು ಕುಮಾರಿ ಸಾರಾ ಅವರು ನಿರೂಪಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಶ್ರೀಮತಿ ರೇಖಾ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಾಂಶುಪಾಲರು, ಸಂಪನ್ಮೂಲ ವ್ಯಕ್ತಿ, ಆರೋಗ್ಯ ಕೇಂದ್ರದ ಸಿಬ್ಬಂದಿ, ಬೋಧಕ - ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ವಂದನೆಗಳನ್ನು ಸಲ್ಲಿಸಿದರು. ಒಟ್ಟಾರೆ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ಕ್ಯಾನ್ಸರ್ ತಡೆಗಟ್ಟುವಿಕೆ, ಮುಂಚಿತವಾಗಿ ಪತ್ತೆಹಚ್ಚುವಿಕೆ ಮತ್ತು ಸಮುದಾಯದಲ್ಲಿ ಆರೋಗ್ಯ ಜಾಗೃತಿಯನ್ನು ಹರಡುವ ಅಗತ್ಯತೆಯ ಕುರಿತಾದ ವಿಶೇಷ ಜಾಗೃತಿ ಉಪನ್ಯಾಸ ಕಾರ್ಯಕ್ರಮ ಪ್ರಮುಖ ಸಂದೇಶದೊಂದಿಗೆ ಯಶಸ್ವಿಯಾಗಿ ಮುಕ್ತಾಯವಾಯಿತು

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ