LIVE TV StateNationalPoliticsCrimeEntertainmentSportsEducationFINANCE & TAXATION
Districts

ಸೇವೆಯ ಸಾರಥಿ ಅನಂತಯಾತ್ರೆಗೆ

ಬಳ್ಳಾರಿ: ಇಲ್ಲಿನ ಬಳ್ಳಾರಿ ಧರ್ಮಕ್ಷೇತ್ರದ ಹಿರಿಯ ಧರ್ಮಗುರುಗಳಾದ ಪೂಜ್ಯ ಫಾದರ್ ಆರ್ಚಿಬಾಲ್ಡ್ ಕೊರಿಯ (ಆರ್ಚಿ ಫಾದರ್) ಅವರ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಪೂಜ್ಯರು ವಯೋಸಹಜ ಅನಾರೋಗ್ಯದಿಂದ ೨೦೨೬ರ ಜೂನ್ ೩ರಂದು ಬುಧವಾರ ತಡರಾತ್ರಿ ಭಗವಂತನಲ್ಲಿ ಲೀನರಾಗಿದ್ದಾರೆ. 

 

ತಮ್ಮ ಸರಳ ಜೀವನ, ನಿಸ್ವಾರ್ಥ ಸೇವಾಭಾವ, ಅಚಲ ನಂಬಿಕೆ ಹಾಗೂ ಆಧ್ಯಾತ್ಮಿಕ ನಾಯಕತ್ವದ ಮೂಲಕ ಅವರು ಸಾವಿರಾರು ಭಕ್ತರ ಹೃದಯಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದರು. ಅವರ ಅಗಲಿಕೆ ಬಳ್ಳಾರಿ ಧರ್ಮಕ್ಷೇತ್ರಕ್ಕೆ ಹಾಗೂ ಸಮಸ್ತ ಕ್ರೈಸ್ತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಪೂಜ್ಯರ ಪಾರ್ಥಿವ ಶರೀರವನ್ನು ೨೦೨೬ರ ಜೂನ್ ೬ರಂದು ಶನಿವಾರ ಬೆಳಿಗ್ಗೆ .೦೦ ಗಂಟೆಗೆ `ಬೆಥನಿ' ಗುರುಗಳ ವಿಶ್ರಾಂತ ನಿಲಯದಲ್ಲಿ ಹಾಗೂ ಬೆಳಿಗ್ಗೆ .೦೦ ಗಂಟೆಯಿA ಸಂತ ಅಂತೋನಿಯವರ ಪ್ರಧಾನ ದೇವಾಲಯ, ಕೌಲ್ ಬಜಾರ್, ಬಳ್ಳಾರಿಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು.

 

ಅವರ ಅಂತಿಮ ಸಂಸ್ಕಾರ ಮತ್ತು ಶ್ರದ್ಧಾಂಜಲಿ ವಿಧಿಗಳು ಅದೇ ದಿನ ಬೆಳಿಗ್ಗೆ ೧೦.೦೦ ಗಂಟೆಗೆ ಸಂತ ಅಂತೋನಿಯವರ ಪ್ರಧಾನ ದೇವಾಲಯದಲ್ಲಿ ನಡೆಯಲಿದ್ದು, ಬಳಿಕ ಕೌಲ್ ಬಜಾರ್ ಕ್ರೈಸ್ತರ ಸಮಾಧಿಯಲ್ಲಿ ಭೂಸಮಾಧಿ ಮಾಡಲಾಗುವುದು. ಧರ್ಮಗುರುಗಳು, ಧಾರ್ಮಿಕ ಸಂಸ್ಥೆಗಳ ಸದಸ್ಯರು, ಭಕ್ತರು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಮತ್ತು ಅಂತಿಮ ಸಂಸ್ಕಾರದ ವಿಧಿಗಳಲ್ಲಿ ಭಾಗವಹಿಸಿ ಪೂಜ್ಯರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸುವಂತೆ ಬಳ್ಳಾರಿ ಧರ್ಮಕ್ಷೇತ್ರದ ಗುರುಶ್ರೇಷ್ಠರಾದ ಫಾದರ್ .ವಿನ್ಸೆಂಟ್ ಅವರು ವಿನಂತಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ