LIVE TV StateNationalPoliticsCrimeEntertainmentSportsEducationFINANCE & TAXATION
Districts

ವಾಲ್ಮೀಕಿ ವೃತ್ತಕ್ಕೆ ನಗರ ಶಾಸಕ ಭರತ್ ರೆಡ್ಡಿ ಭೇಟಿ

ಜನವರಿ 3ರಂದು ವಾಲ್ಮೀಕಿ ವಿಗ್ರಹ ಲೋಕಾರ್ಪಣೆ

ಬಳ್ಳಾರಿ : ನಗರದ ವಾಲ್ಮೀಕಿ ವೃತ್ತಕ್ಕೆ ನಗರ ಶಾಸಕ ಭರತ್ ರೆಡ್ಡಿ ಭೇಟಿ ನೀಡಿ, ವಾಲ್ಮೀಕಿ ವಿಗ್ರಹ ಪ್ರತಿಷ್ಠಾಪನೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಎಲ್ಲ ವಾಲ್ಮೀಕಿ ಭಕ್ತರು ಹಾಗೂ ಸಾರ್ವಜನಿಕರನ್ನು ಒಂದೇ ವೇದಿಕೆಗೆ ಸೇರಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಶಿಲ್ಪ ಕೆತ್ತನೆ ಮಾಡಿದ ಖ್ಯಾತ ಕಲಾವಿದ ಅರುಣ್ ಯೋಗಿರಾಜ್ ಅವರಿಂದಲೇ ಬಳ್ಳಾರಿಯ ವಾಲ್ಮೀಕಿ ಶಿಲ್ಪವನ್ನು ಕೆತ್ತಿಸಲಾಗಿದೆ ಎಂಬುದು ಈ ಕಾರ್ಯಕ್ರಮದ ವಿಶೇಷತೆ ಆಗಿದೆ. ವಾಲ್ಮೀಕಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಪಂಚದಾನ, ಹೋಮ–ಹವನಗಳೊಂದಿಗೆ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಜನವರಿ 3ರಂದು ಭವ್ಯವಾಗಿ ವಾಲ್ಮೀಕಿ ವಿಗ್ರಹ ಲೋಕಾರ್ಪಣೆ ನಡೆಯಲಿದ್ದು, ವಿವಿಧ ಗಣ್ಯರು, ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಈ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವದ ಕಾರ್ಯಕ್ರಮವು ಬಳ್ಳಾರಿಯ ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಉತ್ತೇಜಿಸುವುದರ ಜೊತೆಗೆ, ಸಮಾಜದಲ್ಲಿ ಏಕತೆ ಮತ್ತು ಸೌಹಾರ್ದತೆಯ ಸಂದೇಶವನ್ನು ನೀಡಲಿದೆ ಎಂದು ನಗರ ಶಾಸಕ ಭರತ್ ರೆಡ್ಡಿ ಹೇಳಿದರು.

 

ಈ ಸಂದರ್ಭ ಪಾಲಿಕೆಯ ಆಯುಕ್ತ ಮಂಜುನಾಥ್ ಹಾಗೂ ವಾಲ್ಮೀಕಿ ನಾಯಕರ ಸಮಾಜದ ಮುಖಂಡರು ಹಾಜರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ