LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ವರದಾನವಾಗಿದೆ : ಸೌಮ್ಯಾರೆಡ್ಡಿ

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ವಿಶೇಷವಾದ ಯೋಜನೆಗಳನ್ನು ರೂಪಿಸಿ ಸಬಲೀಕರಣಗೊಳಿಸುತ್ತಿದೆ. ಸರ್ಕಾರ ರಚನೆ ಆದ ತಕ್ಷಣ ಇಡೀ ರಾಜ್ಯವನ್ನು ಸುತ್ತಾಡಲಿಕ್ಕೆ ಶಕ್ತಿ ಯೋಜನೆಯನ್ನು ಜಾರಿಗೆ ತಂದರು. ಎಲ್ಲಾ ಮಹಿಳೆಯರು ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಗಳನ್ನು ಸುತ್ತಿ ದೇವರ ದರ್ಶನವನ್ನು ಮಾಡುವಂತಹ ಭಾಗ್ಯ ಹೊಂದಿದ್ದಾರೆAದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದರು.

 

ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಿಳೆಯರಿಂದಾಗಿ ಎಲ್ಲ ದೇವಾಲಯಗಳು ಭಕ್ತರಿಂದ ತುಂಬಿಕೊAಡಿವೆ. ದೇವಸ್ಥಾನದ ಹುಂಡಿಗಳು ಭರ್ತಿ ಆಗುತ್ತಿವೆ. ಇದಕ್ಕೆಲ್ಲ ಕಾರಣ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ.ಶಿವಕುಮಾರ್ ಅವರು ಮತ್ತು ಸಾರಿಗೆ ಇಲಾಖೆ ಸಚಿವರು ಮತ್ತು ನಮ್ಮ ತಂದೆಯವರಾದ ರಾಮಲಿಂಗಾ ರೆಡ್ಡಿ ಯವರು ಎಂದು ಹೆಮ್ಮೆಯಿಂದ ಹೇಳಿದರು.



ಕೆಪಿಸಿಸಿ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ಎಸ್.ಮAಜುಳಾ, ನಗರ ಶಾಸಕರಾದ ನಾರಾ ಭರತ್ ರೆಡ್ಡಿ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್, ಡಿಸಿಸಿ ಮಹಿಳಾ ಘಟಕದ ಗ್ರಾಮೀಣ ಅಧ್ಯಕ್ಷೆ ಆಶಾಲತಾ, ರಾಜ್ಯ ಮಹಿಳಾ ಮುಖಂಡರಾದ ಪದ್ಮ, ಮಲ್ಲಮ್ಮ, ಮಾಜಿ ಪಾಲಿಕೆ ಸದಸ್ಯರಾದ ಪರ್ವೀನ್ ಭಾನು, ಕೆಪಿಸಿಸಿ ರಾಜ್ಯ ಕಾರ್ಯದರ್ಶಿಯಾದ ಹುಮಾಯೂನ್ ಖಾನ್, ಡಿಸಿಸಿ ಕಾರ್ಯಾಧ್ಯಕ್ಷ ಬೊಯಾಪಾಟಿ ವಿಷ್ಣುವರ್ಧನ, ಉಪಾಧ್ಯಕ್ಷ ಕೆ. ಶ್ರೀನಿವಾಸುಲು, ಮಹಿಳಾ ಕಾಂಗ್ರೆಸ್ ಮುಖಂಡರಾದ ಶಮೀಮ್ ಜಕ್ಲಿ, ಕೆ.ಯಶೋದ, ಡಿ.ಜ್ಯೋತಿ, ರೇಡಿಯೋ ಪಾರ್ಕ್ ಸುನಿತಾ, ನಜುಮ, ಕವಿತಾ ಚಂದ್ರ ಶೇಖರ್, ರೆಹಾನ, ನಾಗಲಕೆರೆ ಗೀತಾ, ರೇಡಿಯೋ ಪಾರ್ಕ್ ಮಮತಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ