LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮಳೆಗಾಲದಲ್ಲಿ ಸೊಳ್ಳೆ ನಿಯಂತ್ರಿಸಿ, ರೋಗ ಮುಕ್ತರಾಗಿರಿ

ಸಾರ್ವಜನಿಕರಿಗೆ ಡಿಹೆಚ್ಓ ಡಾ.ಯಲ್ಲಾ ರಮೇಶಬಾಬು ಕರೆ

ಬಳ್ಳಾರಿ: ಮಳೆಗಾಲದ ಆರಂಭದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ನೀರಿನ ಸಂಗ್ರಹಕಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವ ಮೂಲಕ ಹಾಗೂ ಚರಂಡಿಗಳಲ್ಲಿ ಕಸಕಡ್ಡಿಗಳು ತುಂಬಿಕೊಳ್ಳದAತೆ ನೀರು ಸರಾಗವಾಗಿ ಹರಿಯಲು ಬಿಡುವುದರಿಂದ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ವಿನಂತಿಸಿದ್ದಾರೆ.

ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶಕ್ಕೆ ಕರೆ:

          ಮನೆಯ ಸುತ್ತಮುತ್ತ ಹಾಗೂ ಮೇಲ್ಭಾಗದಲ್ಲಿ, ಹೂವಿನ ಕುಂಡಗಳು, ಟಿನ್, ಪ್ಲಾಸ್ಟಿಕ್ ಕಪ್‌ಗಳಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇವು ಸೊಳ್ಳೆಗಳ ಉತ್ಪತ್ತಿ ಕೇಂದ್ರಗಳಾಗುತ್ತವೆ. ನೀರು ಸಂಗ್ರಹಿಸುವ ಡ್ರಮ್, ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮಡಿಕೆ ಮುಂತಾದವುಗಳನ್ನು ನೀರು ತುಂಬುವ ಮುನ್ನ ಚೆನ್ನಾಗಿ ತಿಕ್ಕಿ ತೊಳೆದು, ಸರಿಯಾಗಿ ಮುಚ್ಚಳ ಮುಚ್ಚಬೇಕು ಎಂದು ಹೇಳಿದ್ದಾರೆ.

ಸಿಡಿಲು-ಮಿಂಚಿನ ಸಂದರ್ಭದಲ್ಲಿ ಸುರಕ್ಷತೆ ಮುಖ್ಯ:

          ಮಾನ್ಸೂನ್ ಮಳೆಯ ಆರಂಭದಲ್ಲಿ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಈ ವೇಳೆ ಬಯಲು ಪ್ರದೇಶದಲ್ಲಿದ್ದರೆ ತಕ್ಷಣವೇ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಬೇಕು. ಒಂದು ವೇಳೆ ಆಶ್ರಯ ಪಡೆಯಲು ಯಾವುದೇ ತಗ್ಗು ಪ್ರದೇಶವಿಲ್ಲದೆ ಬಯಲಿನಲ್ಲೇ ಇರಬೇಕಾಗಿ ಬಂದರೆ, ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಂಡು ಕುಳಿತುಕೊಳ್ಳಬೇಕು. ಇದು ಮಿಂಚಿನಿAದ ಮೆದುಳು ಮತ್ತು ಹೃದಯಕ್ಕೆ ಆಗುವ ಹಾನಿಯನ್ನು ತಪ್ಪಿಸುತ್ತದೆ. ಮರಗಳಿರುವ ಪ್ರದೇಶದಲ್ಲಿದ್ದರೆ ತಕ್ಷಣವೇ ಅಲ್ಲಿಂದ ಹೊರಬರುವುದು ಸುರಕ್ಷಿತ ಎಂದು ಅವರು ತಿಳಿಸಿದ್ದಾರೆ.

DHO
DHO Y Ramesh Babu

 

ಕಲುಷಿತ ನೀರು ಮತ್ತು ವಾಂತಿ-ಭೇದಿ ನಿಯಂತ್ರಣಕ್ಕೆ ಕ್ರಮ:

          ಮಳೆಯಿಂದಾಗಿ ನೀರಿನ ಮೂಲಗಳಿಗೆ ಹೊಸ ನೀರು ಬಂದು ಸೇರುವುದರಿಂದ, ಶುದ್ಧೀಕರಿಸದ ನೀರನ್ನು ಕುಡಿದರೆ ವಾಂತಿ-ಭೇದಿ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಸಾರ್ವಜನಿಕರು ಕ್ಲೋರಿನೇಷನ್ ಕೈಗೊಂಡು ಶುದ್ಧೀಕರಿಸಿದ ಕುಡಿಯುವ ನೀರು ಅಥವಾ ಶುದ್ಧೀಕರಣ ಘಟಕದ ನೀರನ್ನೇ ಬಳಸಬೇಕು. ಸಾಧ್ಯವಿದ್ದಲ್ಲಿ ನೀರನ್ನು ಚೆನ್ನಾಗಿ ಕುದಿಸಿ ಆರಿಸಿ, ಸೋಸಿ ಕುಡಿಯಬೇಕು. ಬಿಸಿಯಾದ ಆಹಾರ ಪದಾರ್ಥಗಳನ್ನೇ ಸೇವಿಸಬೇಕು. ಊಟಕ್ಕೆ ಮುಂಚೆ ಮತ್ತು ಶೌಚಾಲಯದ ಬಳಕೆಯ ನಂತರ ಕೈಗಳನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಶೌಚಾಲಯವನ್ನೇ ಬಳಸಬೇಕು.

ಆತಂಕ ಬೇಡ, ಆಸ್ಪತ್ರೆಗಳಲ್ಲಿ ಔಷಧಿ ದಾಸ್ತಾನು ಇದೆ:

          ಮೇ, ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳುಗಳಲ್ಲಿ ವಾತಾವರಣ ಬದಲಾಗುವುದರಿಂದ ಸಾರ್ವಜನಿಕರು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ಈಗಾಗಲೇ ದಾಸ್ತಾನು ಮಾಡಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ, ಅನಾರೋಗ್ಯ ಕಂಡುಬAದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ