LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಉತ್ತಮ ಕೆಲಸಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ : ಶಾಂತಮಯ ಶ್ರೀ

ಸುರಪುರ : ತಾಲೂಕಿನ ಕುರುಬನ ತಳ್ಳಳ್ಳಿ ಗ್ರಾಮದ ಶ್ರೀ ಜಗದ್ಗುರು ರೇವಣಸಿದ್ದೇಶ್ವರರ ನೂತನ ಮಠದ ಭೂಮಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .

 

ಈ ಸಂದರ್ಭದಲ್ಲಿ ನೂತನ ಮಠದ ಗುದ್ದಲಿ ಪೂಜೆ ನೆರವೇರಿಸಿ  ಅಗತೀರ್ಥ ಹಾಗೂ ಸರೂರ ಹಾಲುಮತದ ಮೂಲ ಗುರುಪೀಠದ  ಶ್ರೀ ಜಗದ್ಗುರು ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳು ಮಾತನಾಡಿದರು.

 

ಗ್ರಾಮಗಳಲ್ಲಿ ಯಾವುದೇ ಸತ್ಕಾರ್ಯಗಳು ಪೂರ್ಣಗೊಳ್ಳಬೇಕಾದರೆ ಗ್ರಾಮಸ್ಥರ ಸಹಾಯ, ಸಹಕಾರದ ಜೊತೆಗೆ ನಾವೆಲ್ಲ ಒಂದೇ ಭಾವನೆಯಿಂದ ಒಗ್ಗಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ. ಶ್ರೀ ಮಠದ ಕಟ್ಟಡ ನಿರ್ಮಾಣ ಕಾಮಗಾರಿ ಇಂದಿನಿಂದ ಪ್ರಾರಂಭಗೊಂಡು  ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸುಂತೆ ಗ್ರಾಮಸ್ಥರಿಗೆ ಸೂಚನೆ ನೀಡಿದರು.



ಮುಂದಿನ ದಿನಗಳಲ್ಲಿ ಶ್ರೀ ರೇವಣಸಿದ್ದೇಶ್ವರರ ಹೆಸರಿನಲ್ಲಿ ಮಠದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಜಾತ್ರೆಯನ್ನು ಮುಂದುವರಿಸೋಣ ನಾನು ಯಾವತ್ತೂ ನಿಮ್ಮೋಂದಿಗಿದ್ದೇನೆ ಎಂದು ಆಶೀರ್ವಚನ ನೀಡಿದರು.

 

ಈ ಸಂದರ್ಭದಲ್ಲಿ ರೇವಣಸಿದ್ದಯ್ಯ ಗುರುವಿನ, ನಿಂಗಣ್ಣ ಸಾಹುಕಾರ ಮಾಲಗತ್ತಿ,ಸಾಹೇಬಗೌಡ ಪೊಲೀಸ್ ಪಾಟೀಲ, ಮಹಾದೇವಪ್ಪ ಪೂಜಾರಿ, ಚಿನ್ನಪ್ಪ ಚೂರಿ, ತಿರುಪತಿಗೌಡ ಕಾಕರಗಲ್ಲ, ಚನ್ನಪ್ಪ ಬೆಳ್ಳಿಕಟ್ಟಿ,ಮಲ್ಲನಗೌಡ ವಡಿಗೇರಿ, ಸೋಮಣ್ಣ ಮಾಲಗತ್ತಿ, ನಿಂಗಣ್ಣ ದೇವಿಕೇರಿ, ತಿಮ್ಮಣ್ಣ ದೊರಿ, ಸಾಯಬಣ್ಣ ಕತಿಗೇರ,ಗೌಡಪ್ಪ ಬಿರಾದಾರ, ರಾಘವೇಂದ್ರ ಮಾಸ್ತರ ಸೇರಿದಂತೆ ಗ್ರಾಮದ ಹಿರಿಯರು, ಯುವಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ