LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕಲ್ಲಹಳ್ಳಿ ಗ್ರಾಮವನ್ನು 24x7 ನಿರಂತರ ನೀರು ಸರಬರಾಜು ಗ್ರಾಮವೆಂದು ಘೋಷಣೆ

 

ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಪ್ರಥಮ ಗ್ರಾಮವಾಗಿ ಹನಸಿ ಗ್ರಾ.ಪಂ ವ್ಯಾಪ್ತಿಯ ಕಲ್ಲಹಳ್ಳಿ ಗ್ರಾಮವನ್ನು ದಿನದ 24 ಗಂಟೆ  ನಿರಂತರ ನೀರು ಸರಬರಾಜು ಗ್ರಾಮವೆಂದು ಜಿ.ಪಂ ಸಿ ಇ ಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ಜೆ ಜೆ ಎಂ ಯೋಜನೆಯ ನಳಕ್ಕೆ ನೀರು ಬಿಡುವ ಮೂಲಕ ಸಾಂಕೇತಿಕವಾಗಿ ಕಳೆದ ಗುರುವಾರ ಘೋಷಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಕಾರ್ಯಾಲಯಗಳು ವಿಶ್ವಬ್ಯಾಂಕ್ ನೆರವು ಹಾಗೂ ಫೀಡ್ ಬ್ಯಾಕ್ ಪೌಂಡೇಶನ್ ಸಹಯೋಗದೊಂದಿಗೆ ಜೆ ಜೆ ಎಂ ಯೋಜನೆಯ ನಳಗಳಿಗೆ 24 ಗಂಟೆ ನಿರಂತರ ನೀರು ಒದಗಿಸುವ ವಿನೂತನ ಕಾರ್ಯವಾಗಿದ್ದು, ಜಿಲ್ಲೆಯಲ್ಲಿ ಇದುವರೆಗೂ 06 ಗ್ರಾಮಗಳನ್ನು 24/7 ನೀರು ಸರಬರಾಜು ಗ್ರಾಮಗಳನ್ನಾಗಿ ಘೋಷಿಸಲಾಗಿದೆ.



ಇದೇ ವೇಳೆ 24/7 ನೀರು ಸರಬರಾಜಿನ ಸಮರ್ಪಕ ಬಳಕೆ ಕುರಿತು  ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

24/7 ನೀರು ಸರಬರಾಜಿನ ಕಾರ್ಯಾಚರಣೆ ಮತ್ತು ನಿರ್ವಹಣೆಯ ಬೈಲಾವನ್ನು ಹಸ್ತಾಂತರಿಸಲಾಯಿತು.

 

ಈ ಸಂಧರ್ಭದಲ್ಲಿ ಹನಸಿ ಗ್ರಾ.ಪಂ ಅಧ್ಯಕ್ಷರಾದ ಎ.ಎಂ ಗಂಗಾಧರಯ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರಾದ ದೀಪಾ.ಎಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ್.ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಗರಿಬೊಮ್ಮನಹಳ್ಳಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕೆ.ಬಸವರೆಡ್ಡಿ, ಕಿರಿಯ ಅಭಿಯಂತರರಾದ ನಂದೀಶ್, ಪಿಡಿಒ ಉಮೇಶ್.ಬಿ, ಗ್ರಾ.ಪಂ ಉಪಾಧ್ಯಕ್ಷರಾದ ಜೆ.ನಿಂಗವ್ವ, ಡಿಟಿಎಸ್ ಯು ಸಿಬ್ಬಂದಿ ಮಂಜುನಾಥ, ಬಸವರಾಜ, ಸಿದ್ದಲಿಂಗ, ಫೀಡ್ ಬ್ಯಾಕ್ ಫೌಂಡೇಶನ್ ನ ಜಿಲ್ಲಾ ಸಂಯೋಜಕ ಅಭಿಷೇಕ್ ಸೇರಿದಂತೆ  VWSC ಸಮಿತಿ ಪದಾಧಿಕಾರೋಗಳು, ಗ್ರಾಪಂ ಸರ್ವ ಸದಸ್ಯರು, ಗ್ರಾಮದ ಮುಖಂಡರು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಸಾರ್ವಜನಿಕರು ಮತ್ತು ಇತರರು ಉಪಸ್ಥಿತರಿದ್ದರು.

 

———
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ