LIVE TV StateNationalPoliticsCrimeEntertainmentSportsEducationFINANCE & TAXATION
Districts Vijayanagara

ಅವಹೇಳನಕಾರಿ ಹೇಳಿಕೆ ಆರೋಪ: ಶಶಿಕಾಂತ ಗುರೂಜಿ ವಿರುದ್ಧ ಕ್ರಮಕ್ಕೆ ಕೂಡ್ಲಿಗಿ ಬಿಜೆಪಿ ಎಸ್ಟಿ ಮೋರ್ಚ್ ಒತ್ತಾಯ

ಕೂಡ್ಲಿಗಿ: ಹುಬ್ಬಳ್ಳಿಯಲ್ಲಿ ಸೆ.29ರಂದು ನಡೆದ ಕಬ್ಬು ಬೆಳೆಗಾರರ ಪ್ರತಿಭಟನೆಯ ಸಾರ್ವಜನಿಕ ವೇದಿಕೆಯಲ್ಲಿ ಶಶಿಕಾಂತ ಗುರೂಜಿ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕುರಿತು ಅವಹೇಳನಕಾರಿ, ಪ್ರಚೋದನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೊಟೋ) ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಎಸ್ಟಿ ಮೋರ್ಚಾ ಪದಾಧಿಕಾರಿಗಳು ಶನಿವಾರ ಕೂಡ್ಲಿಗಿ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.

 

ತಹಸೀಲ್ದಾರ್ ವಿ.ಕೆ. ನೇತ್ರಾವತಿ ಅವರಿಗೆ ಮನವಿ ಸಲ್ಲಿಸಿ, ಸಾರ್ವಜನಿಕ ವೇದಿಕೆಯಲ್ಲಿ ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇರುವುದರಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 news_1791088470_7_715.webp

 

ಮನವಿ ಸ್ವೀಕರಿಸಿದ ತಹಸೀಲ್ದಾರ್ ವಿ.ಕೆ. ನೇತ್ರಾವತಿ ಅವರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಗುರಿಕಾರ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಸೂಲದಹಳ್ಳಿ ಬಸವರಾಜ್, ಶಿವು, ಉಗ್ರಂ ಕಿಟ್ಟಿ, ಉಗ್ರಂ ಉಮೇಶ್, ಬೋಸ್, ಕೆಜಿಎಫ್ ಕೊಟ್ರೇಶ್, ಮಣಿಕಂಠ, ಸ್ವಾಮಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ