LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

 ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : "ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ, ಬಿಬಿಎಂಪಿ ಕಚೇರಿ ಮುಂಭಾಗದ ಪ್ರತಿಮೆ ಹಾಗೂ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾತನಾಡಿದ ಅವರು, "ಕೆಂಪೇಗೌಡರು ಬೆಂಗಳೂರು ಕಟ್ಟದಿದ್ದರೆ, ನಾವು ನೀವು ಇಲ್ಲಿ ಇರುತ್ತಿರಲಿಲ್ಲ. ಇಲ್ಲಿನ ವಾತಾವರಣ ಮನಗಂಡು ಕೆಂಪೇಗೌಡರು ಈ ನಗರ ಕಟ್ಟಿದ ಪರಿಣಾಮ ರಾಜ್ಯ, ದೇಶ ಹಾಗೂ ವಿದೇಶಗಳ ಜನ ಇಲ್ಲಿ ಆಶ್ರಯ ಪಡೆಯುತ್ತಿದ್ದಾರೆ" ಎಂದು ತಿಳಿಸಿದರು.



"ಈ ಹಿಂದಿನ ಸರ್ಕಾರದಲ್ಲಿ ಈ ಪ್ರತಿಮೆ ನಿರ್ಮಾಣ ಮಾಡಿದಾಗ ನಾನು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಪ್ರಾರಂಭಿಸಿದಾಗ, ಯೋಜನಾ ಪ್ರಾಧಿಕಾರ, ನಕ್ಷೆ ಸೇರಿದಂತೆ ಅನೇಕ ತೀರ್ಮಾನ ಮಾಡಿದ್ದೆ. ಆಗ ನಗರಾಭಿವೃದ್ಧಿ ಸಚಿವನಾಗಿ ನಾನು ಹಾಕಿದ ಕೊನೆ ಸಹಿ ಈ ವಿಮಾನ ನಿಲ್ದಾಣ" ಎಂದು ಮೆಲುಕು ಹಾಕಿದರು.

"ಕೆಂಪೇಗೌಡ ಜಯಂತಿ ಅಂಗವಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ನೀಡುವ ಕೆಂಪೇಗೌಡ ಪ್ರಶಸ್ತಿಗೆ ಈ ವರ್ಷ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೂ ಲಭಿಸಿದೆ. ಪ್ರಾಧಿಕಾರಕ್ಕೆ ಅಭಿನಂದನೆಗಳು" ಎಂದು ತಿಳಿಸಿದರು.

ಮಾಧ್ಯಮ ಪ್ರತಿಕ್ರಿಯೆ:

ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಕೆಂಪೇಗೌಡ ಥೀಮ್ ಪಾರ್ಕ್ ವಿಚಾರವಾಗಿ ಕೇಳಿದಾಗ, "ಈ ಯೋಜನೆ ಜವಾಬ್ದಾರಿಯನ್ನು ಕೃಷ್ಣ ಭೈರೇಗೌಡ ಅವರು ವಹಿಸಿಕೊಂಡಿದ್ದಾರೆ. ಈ ಯೋಜನೆಗೆ ಅನುದಾನ ಸಿಕ್ಕಿರಲಿಲ್ಲ. ಈಗ ಅದನ್ನು ಸರಿಪಡಿಸಲಾಗಿದ್ದು, ಮುಂದಿನ 3-4 ತಿಂಗಳಲ್ಲಿ ಅಂತಿಮ ರೂಪ ನೀಡಲಾಗುವುದು" ಎಂದು ತಿಳಿಸಿದರು.



ಬಿಬಿಎಂಪಿ ಕಚೇರಿ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, "ಕೆಂಪೇಗೌಡ ಜಯಂತಿ ಆಚರಣೆ ಆರಂಭಿಸಿದ್ದು ನಾವೇ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು ನಾವೇ, ಇದಕ್ಕೆ 5 ಎಕರೆ ಜಾಗವನ್ನು ನೀಡಿದ್ದೇವೆ" ಎಂದು ತಿಳಿಸಿದರು.

ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗಲಿದೆ, ಸರ್ಕಾರದಲ್ಲಿ ಪವರ್ ಸೆಂಟರ್ ಜಾಸ್ತಿಯಾಗಿವೆ ಎಂಬ ಸಚಿವ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ನನಗೆ ಈ ವಿಚಾರ ಗೊತ್ತಿಲ್ಲ. ನೀವು ಅವರನ್ನೇ ಕೇಳಿ. ನಾವು ಅವರ ಜೊತೆ ಚರ್ಚೆ ಮಾಡಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ" ಎಂದು ತಿಳಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ