LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಜಿಲ್ಲಾಸ್ಪತ್ರೆಗೆ ಡಿಹೆಚ್ ಒ ಭೇಟಿ, ರೋಗಿಗಳ ಕ್ಷೇಮ ವಿಚಾರಣೆ

ಬಳ್ಳಾರಿ : ಅಕಾಲಿಕ ಮಳೆಯಿಂದ ಜಿಲ್ಲೆಯಾದ್ಯಂತ ವಾತಾವರಣದಲ್ಲಿ ಉಂಟಾದ ಬದಲಾಣೆಯಿಂದ ಜ್ವರ ಪ್ರಕರಣಗಳು ಕಂಡು ಬಂದಿದ್ದು, ಪಸ್ತುತ  ಪ್ರಕರಣಗಳು ಕಡಿಮೆಯಾಗಿದ್ದು ಸಾರ್ವಜನಿಕರು ಗಾಬರಿಯಾಗದೆ ಇರಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಯಲ್ಲಾ ರಮೇಶ್ ಬಾಬು ಸೂಚಿಸಿದ್ದಾರೆ.



ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ದಾಖಲಾದ ರೋಗಿಗಳ  ಆರೋಗ್ಯ ವಿಚಾರಿಸಿ, ಎಲ್ಲ ಚಿಕಿತ್ಸಾ ಸೌಲಭ್ಯಗಳು ಉಚಿತವಾಗಿ ಲಭ್ಯವಿದ್ದು, ಈಗಾಗಲೆ ಜಿಲ್ಲಾ ಆಸ್ಪ ತ್ರೆ, ತಾಲೂಕ ಆಸ್ಪತ್ರೆ ಸೇರಿದಂತೆ  ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷದಿಗಳ ದಾಸ್ತಾನು ಇಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ತಿಳಿಸಿದರು.

 

ನಿರಂತರ ಮಳೆಯ ಹಿನ್ನಲೆಯಲ್ಲಿ ಮನೆಯ ಸುತ್ತ ಮುತ್ತ ನೀರು ನಿಲ್ಲುವ ಸಾಧ್ಯತೆಗಳು ಇದ್ದು ಸ್ವಚ್ಛತೆ ಕಾಪಾಡಿ ಕೊಳ್ಳಬೇಕು. ವೈರಸ್‌ಗಳು ಸಾಮಾನ್ಯ ಅಥವಾ ಶೀತ ತಾಪಮಾನದಲ್ಲಿಯೂ ಸಹ ಗುಣಿಸುವುದರಿಂದ, ಪೌಷ್ಟಿಕಯುಕ್ತ ಬಿಸಿಯಾದ ಆಹಾರವನ್ನು ಸೇವಿಸುವ ಮೂಲಕ ವೈರಲ್ ಜ್ವರ ಬರುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ವೈರಲ್ ಕಾಯಿಲೆಗಳನ್ನು ಎದುರಿಸಲು ಆರೋಗ್ಯಕರ ಜೀವಸತ್ವಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದರೊಂದಿಗೆ ಕುದಿಸಿ ಆರಿಸಿ ಸೊಸಿದ ನೀರು ತಪ್ಪದೆ ಸೇವಿಸಲು ವಿನಂತಿಸಿದರು.



ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ ಎನ್ ಬಸರೆಡ್ಡಿ, ಶುಶ್ರೂಷಣಾ ಅಧೀಕ್ಷಕರು ವಿಮಲಾ, ಸೇರಿದಂತೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ