LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ವಿವಿಧ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ

ಬಳ್ಳಾರಿ : ಜಿಲ್ಲಾಡಳಿತದಿಂದ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.

ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೊ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ಜಿಲ್ಲಾ ಕೇಂದ್ರದಲ್ಲಿ ಜೂ.27 ರಂದು ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ನಿರ್ಧಾರ ಕೈಗೊಳ್ಳಲಾಯಿತು.

ಜೂ.27 ರಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಚರಿಸಲಾಗುವುದು. ವೇದಿಕೆ ವ್ಯವಸ್ಥೆ ಮತ್ತು ಅಲಂಕಾರ, ಆಸನಗಳ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಕೆಂಪೇಗೌಡ ಜಯಂತಿ ಅಂಗವಾಗಿ ಭವ್ಯ ಮೆರವಣಿಗೆ ನಡೆಯಲಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಬೇಕು. ಮೆರವಣಿಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.

 ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 10 ರಂದು ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮಗಳನ್ನು ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ವಿವಿಧ ಮುಖಂಡರ ಸಮ್ಮುಖದಲ್ಲಿ ನಿರ್ಧರಿಸಲಾಯಿತು.



ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರನ್ನನು ಆಹ್ವಾನಿಸಬೇಕು. ಮಹನೀಯರ ಸಾಧನೆ ಮತ್ತು ಕಾರ್ಯಗಳ ಬಗ್ಗೆ ಬಿತ್ತರಿಸಲು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಸಬೇಕು. ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ-ತಂಡಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.

ಶಾಲೆ-ಪಿಯು ಕಾಲೇಜುಗಳಲ್ಲಿ ಕೆಂಪೇಗೌಡರ ಕುರಿತಾಗಿ ಪ್ರಬಂಧ, ಚಿತ್ರಕಲೆ, ಆಶುಭಾಷಣ, ವಿಚಾರಗೋಷ್ಠಿ ಮತ್ತು ಜಾಥಾ ಕಾರ್ಯಕ್ರಮ ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿದ್ದು, ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಡಿಡಿಪಿಐ ಅವರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ