LIVE TV StateNationalPoliticsCrimeEntertainmentSportsEducationFINANCE & TAXATION
Districts

ವಾಸವಿ ಯುವಜನ ಸಂಘದಿಂದ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳ ವಿತರಣೆ

ಬೆಂಗಳೂರು : ಪರಿಸರ ಸ್ನೇಹಿ ಹಬ್ಬ ಆಚರಿಸುವ ರಾಜ್ಯ ಸರ್ಕಾರದ ಕೆರೆಗೆ ಓಗೊಟ್ಟಿರುವ ಶ್ರೀ ವಾಸವಿ ಯುವಜನ ಸಂಘ ಜನ ಸಾಮಾನ್ಯರಿಗೆ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳನ್ನು ವಿತರಿಸಿತು. “ಪ್ರಕೃತಿಯನ್ನು ಉಳಿಸಿ – ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಿ” ಎಂಬ ಘೋಷವಾಕ್ಯ ಮೊಳಗಿಸಿದೆ.

ನಗರದ ಸಸ್ಯಕಾಶಿ ಲಾಲ್ಬಾಗ್ ಪಶ್ಚಿಮ ದ್ವಾರದ ಮುಂದೆ ಶ್ರೀ ವಾಸವಿ ಯುವಜನ ಸಂಘ ಸದಸ್ಯರು 9ನೇ ವರ್ಷವೂ ಮಣ್ಣಿನ ಮೂರ್ತಿಗಳನ್ನು ಗಣಪತಿಯನ್ನು ವಿತರಿಸಿದರು.



ಬೆಳ್ಳಂಬೆಳಿಗ್ಗೆ ವಾಯು ವಿಹಾರಕ್ಕೆ ಬಂದವರಿಗೆ 500 ಮಣ್ಣಿನ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ವಿತರಿಸಿದರು. ಪ್ರಕೃತಿಗೆ ಹಾನಿಕಾರಕವಾದ ರಾಸಾಯನಿಕ ಬಣ್ಣಗಳಿಂದ ಮಾಡಿದ ಪ್ಲ್ಯಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಖರೀದಿಯನ್ನು ನಿಲ್ಲಿಸಬೇಕು. ಸರ್ಕಾರದ ಆದೇಶಕ್ಕೆ ಮನ್ನಣೆ ನೀಡಿ ಮಣ್ಣಿನಿಂದ ಮಾಡಿದ ದೀಪಗಳನ್ನೇ ಬಳಸಬೇಕು ಎಂದು ಜನ ಸಾಮಾನ್ಯರಿಗೆ ತಿಳಿವಳಿಕೆ ನೀಡಿದರು.

 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ ಅವರು  ರಚಿಸಿರುವ (ಅವರ 50ನೇ ಪುಸ್ತಕ) "ಮೋಸ್ಟ್ ಅಡೋರಬಲ್ ಮೋದಿಜಿ" ಎಂಬ ಶೀರ್ಷಿಕೆಯ ಪುಸ್ತಕವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

 

ನಂತರ ಮಾತನಾಡಿದ ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ, ಪರಿಸರ ಸಂರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ನಮಗೆಲ್ಲರಿಗೂ ಮಾದರಿಯಾಗಿದ್ದಾರೆ. ನಾವೆಲ್ಲರೂ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿಸಬೇಕು  ವಿವರಿಸಿದರು



ಈ ಸಂದರ್ಭದಲ್ಲಿ ಶ್ರೀ ವಾಸವಿ ಯುವಜನ ಸಂಘದ ಪದಾಧಿಕಾರಿಗಳಾದ ದ್ವಾರಕನಾಥ್, ಶಂಕರ್, ಶ್ರೀಧರ್, ಸಂಘದ ಅಧ್ಯಕ್ಷ ಗುರುಪ್ರಸಾದ್, ಮಾಜಿ ಅಧ್ಯಕ್ಷ ಮುರಳಿ ಕೃಷ್ಣ, ಪದಾಧಿಕಾರಿಗಳಾದ ಮಹೇಂದ್ರ ಕುಮಾರ್, ಬಾಲಾಜಿ ಸೇರಿ 40 ಕ್ಕೂ ಅಧಿಕ ಮಂದಿ ಜನ ಜಾಗೃತಿಯಲ್ಲಿ ಪಾಲ್ಗೊಂಡರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ