22 Nov 2026, 06:13:07 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
LIVE TV StateNationalPoliticsCrimeEntertainmentSportsEducationFINANCE & TAXATION
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts

ಅಲೆಮಾರಿ ಜನಾಂಗ ದವರಿಗೆ ಆಹಾರ ಸಾಮಾಗ್ರಿ ವಿತರಣೆ

ನಾಯಕನಹಟ್ಟಿ : ಹಟ್ಟಿ ತಿಪ್ಪೇಶನ ಕ್ಷೇತ್ರದಲ್ಲಿ ಸುಮಾರು 40 ವರ್ಷಗಳಿಂದ ಸೂಕ್ತ ನೆಲೆ ಇಲ್ಲದೆ ಸುಡುಗಾಡು ಸಿದ್ದ ಜನಾಂಗದವರು ಪ್ರತಿ ವರ್ಷ ಒಂದೊAದು ಸ್ಥಳದಲ್ಲಿ ವಾಸಿಸುತ್ತಾ ಬಂದಿರುತ್ತಾರೆ. ಅವರಿಗೆ ಸೂಕ್ತ ನೆಲೆ ನಿರ್ಮಿಸಿಕೊಡಬೇಕೆಂದು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪ್ರಭಲ ಟಿಕೆಟ್ ಆಕಾಂಕ್ಷಿ ಪಟೇಲ್ ಕೆ.ಬಿ ಕೃಷ್ಣಗೌಡ ಮನವಿ ಮಾಡಿಕೊಂಡರು.

ಪಟ್ಟಣದಲ್ಲಿ ಸುಡುಗಾಡು ಸಿದ್ದರಿಗೆ ಮೀಸಲಿರುವ ಜಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಯವರನ್ನು ಸುಡುಗಾಡು ಸಿದ್ದ ಜನಾಂಗದವರು ಬೇಟಿ ಮಾಡಿ ತಮ್ಮ ಅಳಲನ್ನು ತೋಡಿಕೊಂಡರು. ಆದ್ದರಿಂದ ಮಾಜಿ ಶಾಕಸರ ನಿರ್ದೇಶನದಂತೆ ರಿ.ಸರ್ವೇ ನಂ:193 ರಲ್ಲಿ ಸುಡುಗಾಡು ಸಿದ್ದ ಜನಾಂಗಕ್ಕೆ ಮೀಸಲಿರುವ ಜಾಗವನ್ನು ಸ್ವಚ್ಚಗೊಳಿಸಿಕೊಂಡು ವಾಸಿಸುವಂತೆ ಹೇಳಿ ಅವರಿಗೆ ಅಗತ್ಯವಿರುವ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಲಾಯಿತು.



ನಂತರ ಕೆ.ಎಂ.ಪಂಚಾಕ್ಷರಿಸ್ವಾಮಿ ಮಾತನಾಡಿ ಈ ಭಾಗದಲ್ಲಿ ಸುಡುಗಾಡು ಸಿದ್ದರು 40 ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿದ್ದಾರೆ. ಇವರಿಗೆ ಆಶ್ರಯ ಯೋಜನೆಯಡಿಯಲ್ಲಿ ಮನೆಗಳನ್ನು ನೀಡುವುದಾಗಿ ಹೇಳಿ ಪಟ್ಟಣ ಪಂಚಾಯಿತಿ ಸದಸ್ಯರುಗಳು ಮತಗಳನ್ನ ಹಾಕಿಸಿಕೊಂಡು ಸುಡುಗಾಡು ಸಿದ್ದ ಜನಾಂಗದವರಿಗೆ ವ್ಯವಸ್ಥೆ ಕಲ್ಪಿಸಿರಲಿಲ್ಲ. ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಯವರ ಗಮನಕ್ಕೆ ತಂದಾಗ ನೀವುಗಳು ಎಲ್ಲಿಗೂ ಹೋಗಬೇಕಾಗಿಲ್ಲ, ಅವರಿಗೆ ಅಗತ್ಯವಿರುವ ವಸ್ತುಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದರು.

ತಾತ್ಕಾಲಿಕವಾಗಿ ನೆಲೆಸುವುದಕ್ಕೆ ವ್ಯವಸ್ಥೆ ಕಲ್ಪಿಸಿ ಎಂದು ವಿನಂತಿಸಿಕೊಂಡಾಗ ನಮ್ಮ ವಿನಂತಿಯನ್ನು ಸ್ವೀಕರಿಸಿ ಈ ದಿನ ಆಹಾರ ಸಾಮಾಗ್ರಿಗಳನ್ನು ನೀಡುವುದರ ಜೊತೆಗೆ ಊಟ, ತಿಂಡಿ ವ್ಯವಸ್ಥೆ ಕೊಡಿಸಿ ಅಳಿಲು ಸೇವೆ ಮಾಡುವುದಾಗಿ ತಿಳಿಸಿದರು. ಯಾರಾದರು ದಾನಿಗಳು ಇದ್ದರೆ ಸುಡುಗಾಡು ಸಿದ್ದ ಜನಾಂಗಕ್ಕೆ ತಮ್ಮ ಕೈಲಾದ ಸಹಾಯ ಮಾಡಿ ಎಂದು ವಿನಂತಿಸಿಕೊಂಡರು. ಆಶ್ರಯ ಯೋಜನೆಯಲ್ಲಿ ಅಡಿಯಲ್ಲಿ ಸುಡುಗಾಡು ಸಿದ್ದ ಜನಾಂಗದವರಿಗೆ ಮನೆಗಳನ್ನು ನಿರ್ಮಿಸಿ ಕೊಡಬೇಕೆಂದು ಈ ಮೂಲಕ ಅಧಿಕಾರಿಗಳಿಗೆ ಹೇಳಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ