LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಆಯ್ಕೆ

ಬೆಂಗಳೂರು:  ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆ ಆಗಿದ್ದಾರೆ.

 

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು.

 

ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.

 news_1780146149_3_221.webp

 

ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು.

 

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಘೋಷಿಸಿದರು.

 

ಇದಕ್ಕೂ ಮೊದಲು ಸಭೆಯ ಆರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಪ್ರಕ್ರಿಯೆಯು ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಯೊಂದಿಗೆ ನಡೆಯಲಿದೆ ಎಂದು ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಪ್ರಕಟಿಸಿ, ಚಾಲನೆ ನೀಡಿದರು.

 

ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ವಿಚಾರವನ್ನು ಎಐಸಿಸಿ ವಿವೇಚನೆಗೆ ಬಿಡಲಾಗಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದರು. ಪರಮೇಶ್ವರ್ ಅವರು ಅನುಮೋದಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಇದನ್ನು ಬೆಂಬಲಿಸಿದರು.

 news_1780146148_1_693.webp

 

ನಂತರ 10 ನಿಮಿಷಗಳ ವಿರಾಮ ನೀಡಲಾಗಿದೆ ಎಂದು ಸುರ್ಜೆವಾಲ ಹೇಳಿದರು.

 

ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ ಕೊಠಡಿಗೆ ತೆರಳಿದರು.

 news_1780146148_0_730.webp

 

ಅಲ್ಲಿಂದ ಸಮ್ಮೇಳನ ಸಭಾಂಗಣಕ್ಕೆ ಮೂವರು ವಾಪಸ್ಸು ಬಂದ ನಂತರ ಶಾಸಕಾಂಗ ಪಕ್ಷದ ನೂತನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.

 news_1780146148_2_932.webp

 

ನಂತರ ನೂತನ ನಾಯಕ ಡಿ ಕೆ ಶಿವಕುಮಾರ್ ಅವರು ನಿರ್ಗಮಿತ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯ ಸೇವೆಯನ್ನು ಕೊಂಡಾಡುವ ನಿರ್ಣಯ ಮಂಡಿಸಿ, ಸಭೆಯ ಬೆಂಬಲ ಕೋರಿದರು. ಸಭೆ ಒಕ್ಕೋರಲಿನಿಂದ ಬೆಂಬಲಿಸಿತು.

ಸರ್ವಾನುಮತದಿಂದ ಡಿಕೆಶಿ ಆಯ್ಕೆ ಎಂದ ವೇಣುಗೋಪಾಲ್

ಸಿಎಲ್​ಪಿ ನಾಯಕ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಇದನ್ನು ಡಾ.ಜಿ.ಪರಮೇಶ್ವರ್ ಅನುಮೋದಿಸಿದರು.ಬಳಿಕ ಎಲ್ಲಾ ಶಾಸಕರು CLP ನಾಯಕನಾಗಿ ಡಿಕೆ ಆಯ್ಕೆಗೆ ಸಹಮತಿಸಿದ್ದಾರೆ. ಹೀಗಾಗಿ CLP ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಸಿದ್ದರಾಮಯ್ಯ ನಾಯಕತ್ವದಲ್ಲೇ ಚುನಾವಣೆ

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ನಾಯಕತ್ವದಲ್ಲೇ ಕಾಂಗ್ರೆಸ್ ಚುನಾವಣೆಗೆ ಹೋಗಲಿದೆ. ಕಾಂಗ್ರಸ್ ಪಕ್ಷ ಸಿದ್ದರಾಮಯ್ಯರನ್ನು ಸಮರ್ಥವಾಗಿ ಬಳಸಿಕೊಳ್ಳಲಿದೆ ಎಂದ ಕೆಸಿ ವೇಣುಗೋಪಾಲ್, ಮಾಧ್ಯಮದವರ ಮುಂದೆಯೇ ಸಿದ್ದರಾಮಯ್ಯನವರಿಗೆ ಧನ್ಯವಾದ ತಿಳಿಸಿದರು

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆ ಶಿವಕುಮಾರ್

ಶಾಸಕಾಂಗ ಸಭೆ ಬಳಿಕ ಡಿಕೆ ಶಿವಕುಮಾರ್ ಅವರು ನೇರವಾಗಿ ಲೋಕಭವನಕ್ಕೆ ತೆರಳಿ ರಾಜ್ಯಪಾಲಥಾವರ್ ಚೆಂದ್ ಗೆಹ್ಲೋಟ್  ರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಿದ್ದಾರೆ. ಶಾಸಕರ ಒಪ್ಪಿಗೆ ಇರುವುದು, ಪಕ್ಷವು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿರುವ ಪತ್ರವನ್ನೂ ಗರ್ವನರ್ ಗೆ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

 

 ಬಳಿಕ ಗವರ್ನರ್ ಥಾವರ್ ಚೆಂದ್ ಗೆಹ್ಲೋಟ್ ಅವರೂ ಸಹ ಸಿಎಲ್ಪಿ ನಾಯಕ ಡಿ.ಕೆ.ಶಿವಕುಮಾರ್​​ಗೆ ಅವರಿಗೆ ಸರ್ಕಾರ ರಚನೆಗೆ ಆಹ್ವಾನಿಸಿದರು. ಇದರೊಂದಿಗೆ ಎಲ್ಲಾ ಪ್ರಕ್ರಿಯೆಗಳು ಅಂತ್ಯವಾಗಿದ್ದು, ಇನ್ನೇನಿದ್ದರೂ ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವುದೊಂದೇ ಬಾಕಿ.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ