LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಗಿರೀಶ್ ಕುಮಾರ್.ಜಿ ಗೆ ಡಾಕ್ಟರೇಟ್ ಪದವಿ

ಬಳ್ಳಾರಿ/ ವಿಜಯನಗರ: ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೌಡ್ರು ದೊಡ್ಡ ಹನುಮಂತಪ್ಪ ಮತ್ತು ನಾಗರತ್ನ ದಂಪತಿಗಳು ಮಗನಾದ ಗಿರೀಶ್ ಕುಮಾರ್.ಜಿ ಅವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ ಹಂಪಿಯಿಂದ ಪಿಎಚ್.ಡಿ ಪದವಿಯನ್ನು ಘೋಷಣೆ ಮಾಡಲಾಯಿತು.

ಇವರು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ತುಮಕೂರಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ನಾಗೇಂದ್ರ ಅವರು ಮಾರ್ಗದರ್ಶನದಲ್ಲಿ ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ ( ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ) ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ನೀಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಕುಲಸಚಿವರಾದ ಡಾ.ವಿಜಯ್  ಪೂಣಚ್ಚ ತಂಬಂಡ ಅವರು ಅಧಿಸೂಚನೆ ಹೊರಡಿಸಿದ್ದಾರೆ.



ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ (ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ : ಬಳ್ಳಾರಿ ವಿಜಯನಗರ ಜಿಲ್ಲೆ) ಎಂಬ ವಿಷಯದ ಸಂಶೋಧನೆ ಕರ್ನಾಟಕ ರಾಜ್ಯದ ಕನ್ನಡದ ಮೊದಲ ಸಂಶೋಧನೆ ಮಹಾಪ್ರಬಂಧವಾಗಿದೆ.

ಈ ವಿಷಯದ ಕುರಿತು 2019 ರಿಂದ 2022 ಅವಧಿ ವರೆಗೆ ಅಧ್ಯಾಯ ಮಾಡಿ, ಸೈಬರ್ ಅಪರಾಧಗಳ ಬಳ್ಳಾರಿ ಜಿಲ್ಲಾ ಪಕ್ಷೀನೋಟ, ಸೈಬರ್ ಅಪರಾಧಗಳ ಹುಟ್ಟು, ಬೆಳವಣಿಗೆ, 4 ವರ್ಷಗಳ ಸೈಬರ್ ಅಪರಾಧಗಳ ಅಂಕಿ, ಸಂಖ್ಯೆಗಳು, ಪೈ ಮತ್ತು ಸ್ತಂಭ ನಕ್ಷೆಗಳು ಒಳಗೊಂಡಿದೆ. ಮುಖ್ಯವಾಗಿ ವಿಜಯ ಕರ್ನಾಟಕ ಮತ್ತು ವಿಜಯವಾಣಿ ದಿನಪತ್ರಿಕೆ ಹಾಗು ಮೈಸೂರಿನ ಪ್ರತಿನಿಧಿ ದಿನಪತ್ರಿಕೆಗಳಲ್ಲಿ ಬರಹ, ಲೇಖನ, ಅಂಕಣಗಳು ವಿಶೇಷ ವಿಶ್ಲೇಷಣೆ,  ಸೈಬರ್ ಅಪರಾಧಗಳ ಬಗ್ಗೆ ಕರ್ನಾಟಕ ರಾಜ್ಯದ ಪೋಲಿಸ್ ಇಲಾಖೆಯ ಐ.ಪಿ.ಎಸ್, ಸಿ.ಪಿ.ಐ, ಪಿ.ಎಸ್.ಐ ಅಧಿಕಾರಿಗಳು, ಹಿರಿಯ ಪತ್ರಕರ್ತರು, ಸೈಬರ್ ತಜ್ಞರು, ವಂಚನೆ ಒಳಗಾದವರ ಸಂರ್ದಶನ ಮತ್ತು ವಿಶ್ಲೇಷಣೆ ಮತ್ತು ಅವರ ಮಾನಸಿಕ ಸ್ಥಿತಿಗತಿ ಬಗ್ಗೆ ಈ ಸಂಶೋಧನೆ ಒಳಗೊಂಡಿದೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ