ಬೆಂಗಳೂರು: ಇತ್ತೀಚಿಗೆ ಅತ್ಯಾಚಾರ ಎಸಗಿ ಕೊಲೆ ಮಾಡಿ, ಬಳಿಕ ಶವವನ್ನು ಬಾವಿಗೆ ಎಸೆದಿರುವ ಪ್ರಕರಣ ನಡೆದ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿಯ ನಿವಾಸಕ್ಕೆ ಭಾನುವಾರ ಬೆಳಗ್ಗೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಸಿ. ನರೇಂದ್ರ ಅವರು ಭೇಟಿ ನೀಡಿ ಅವರ ತಂದೆ-ತಾಯಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ, ಧೈರ್ಯ ಹೇಳಲು ಭೇಟಿ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೊಕ್ರಾಣಿ ಗ್ರಾಮದ ಅಶ್ವಿನಿಯನ್ನು ಬದುಕಿ ಬಾಳಬೇಕಿದ್ದ ಹೆಣ್ಣು ಮಗಳನ್ನು ಕಾಮುಕರು, ಅತ್ಯಾಚಾರವೆಸಗಿ ಕೊಲೆ ಮಾಡಿ ಬಾವಿಗೆ ಎಸೆದಿದ್ದನ್ನು ರಾಜ್ಯದ ಜನತೆ ತಲೆ ತಗ್ಗಿಸುವಂತಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ ಎಂದರು.
ಅತ್ಯಾಚಾರ, ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಈಗಾಗಲೇ ಪೋಲಿಸ್ ಇಲಾಖೆ ವಿಶೇಷ ತನಿಖಾ ತಂಡದಿಂದ ಕಾರ್ಯೋನ್ಮುಖವಾಗಿದೆ ಎಂದರು.
ಇತ್ತೀಚೆಗೆ ರಾಜ್ಯದಲ್ಲಿ ಬರೀ ದಲಿತರ ಮೇಲೆ, ದೌರ್ಜನ್ಯ, ದಬ್ಬಾಳಿಕೆ ಮತ್ತು ಅತ್ಯಾಚಾರ, ಕೊಲೆಯಾoತಹ ಅನೇಕ ಪ್ರಕರಣಗಳು ಹೆಚ್ಚುತ್ತಿವೆ. ಇನ್ನು ರಾಯಚೂರು ಜಿಲ್ಲೆಯಲ್ಲಿ ಕೆಲವೇ ಕೆಲವು ದಿನಗಳಲ್ಲಿ ಮೂರು ಜನರ ಬೀಕರ ಕೊಲೆಯಾಗಿರುವುದು ವಿಷಾದನೀಯ ಸಂಗತಿ ಎಂದರು.