LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನಾಚರಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯವೇ ಇಲ್ಲದ ಸಂದರ್ಭದಲ್ಲಿ ಪರ್ಯಾಯ ಶಕ್ತಿ ಕಟ್ಟಿದವರು ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ.

ಭಾರತೀಯ ಜನಸಂಘದ ಸಂಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾತ್ತು. ಸಂದರ್ಭದಲ್ಲಿ ಮಾತನಾಡಿದ ಅವರು, ಮುಖರ್ಜಿ ಅವರು ಒಬ್ಬ ಮಹಾನ್ ಮೇಧಾವಿ, ಅಪರಿಮಿತ ದೇಶಭಕ್ತ, ಪ್ರತಿಭಾನ್ವಿತ ವ್ಯಕ್ತಿ. ವೀರೋಚಿತ ಹೋರಾಟ ಮಾಡಿದವರು. ಭಾರತದ ಏಕತೆಯಲ್ಲಿ ಪ್ರಮುಖ ಪಾತ್ರ ವಹಿಸಿದ ದಿಗ್ಗಜ ನಾಯಕರು ಎಂದು ನುಡಿದರು.

news_1783398781_0_232.webp

 

ಇದೇವೇಳೆ ಗಣ್ಯರು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಿಜೆಪಿಯ ಕರ್ನಾಟಕ ರಾಜ್ಯ ಸಹ-ಉಸ್ತುವಾರಿ ಡಾ. ಸುಧಾಕರ್ ರೆಡ್ಡಿ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ರಾಜ್ಯ ಉಪಾಧ್ಯಕ್ಷರಾದ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಪಕ್ಷದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST