LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Bellary

ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆ

ಬಳ್ಳಾರಿ :  ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ನೆರವು ತಲುಪಿಸುವ ನಿಟ್ಟಿನಲ್ಲಿ ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಕರೆ ನೀಡಿದರು.

 

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಹಾಗೂ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲೆಯ ಪ್ಯಾರಾ ಲೀಗಲ್ ಸ್ವಯಂ ಸೇವಕರಿಗೆ ಹಮ್ಮಿಕೊಂಡಿದ್ದ ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

 

ಸಂವಿಧಾನದ ಆಶಯದಂತೆ ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಒದಗಿಸುವುದು ಕಾನೂನು ಸೇವಾ ಪ್ರಾಧಿಕಾರದ ಮೂಲ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಪ್ಯಾರಾ ಲೀಗಲ್ ಸ್ವಯಂಸೇವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

 news_1787227474_2_907.webp

 

ಕೇವಲ ವಿದ್ಯಾವಂತರು ಅಥವಾ ಹಣವಂತರಿಗೆ ಮಾತ್ರವಲ್ಲದೆ ಬಡವರು, ನಿರ್ಗತಿಕರು ಮತ್ತು ಅಸಹಾಯಕರ ಪರವಾಗಿ ನಿಂತು ಅವರಿಗೆ ಕಾನೂನು ನ್ಯಾಯ ಒದಗಿಸುವುದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗುರಿಯಾಗಿದೆ. ನೆರವು ಕೋರಿ ಬರುವ ಸಂತ್ರಸ್ತರು ಹಾಗೂ ದುರ್ಬಲರು ಹಂಚಿಕೊಳ್ಳುವ ವೈಯಕ್ತಿಕ ವಿಚಾರಗಳನ್ನು ಅತ್ಯಂತ ಗೌಪ್ಯವಾಗಿಡುವುದು ಪ್ರತಿಯೊಬ್ಬ ಸ್ವಯಂಸೇವಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

 

ಮುಖ್ಯವಾಗಿ ಸಹಾಯಕ್ಕಾಗಿ ಬರುವ ಜನರಿಗೆ ಯಾವುದೇ ಕಾರಣಕ್ಕೂ ಹುಸಿ ಅಥವಾ ಸುಳ್ಳು ಭರವಸೆಗಳನ್ನು ನೀಡದೆ, ಕಾನೂನಿನ ಚೌಕಟ್ಟಿನಲ್ಲಿ ಸೂಕ್ತ ಮಾರ್ಗದರ್ಶನ ನೀಡಿ ಪ್ರಾಧಿಕಾರಕ್ಕೆ ಕೊಂಡೊಯ್ಯುವ ಸೇತುವೆಯಾಗಿ ಕೆಲಸ ಮಾಡಬೇಕು. ಉತ್ತಮ ವ್ಯಕ್ತಿಯಾಗಲು ಸ್ವಚ್ಛ ಕೈಗಳು ಮತ್ತು ಸ್ಪಷ್ಟ ಮಾತು ಇರಬೇಕು ಎಂಬ ಮೌಲ್ಯಗಳನ್ನು ಸ್ವಯಂಸೇವಕರು ಕಡ್ಡಾಯವಾಗಿ ಪಾಲಿಸಬೇಕು ಎಂದರು.

 

ಕಾನೂನು ನಿಂತ ನೀರಲ್ಲ, ಅದು ನಿರಂತರ ಬದಲಾವಣೆಗೆ ಒಳಪಡುತ್ತದೆ. ಹಾಗಾಗಿ ಸ್ವಯಂಸೇವಕರು ಹೊಸ ಕಾಯ್ದೆಗಳು ಮತ್ತು ತಿದ್ದುಪಡಿಗಳ ಬಗ್ಗೆ ಸದಾ ಜಾಗೃತರಾಗಿರಬೇಕು. ಇಂತಹ ತರಬೇತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಅನುಮಾನಗಳನ್ನು ಪರಿಹರಿಸಿಕೊಂಡು ಸಮಾಜಮುಖಿ ಸೇವೆಗೆ ಸಜ್ಜಾಗುವಂತೆ ಸ್ವಯಂಸೇವಕರಿಗೆ ಕಿವಿಮಾತು ಹೇಳಿದರು.

 news_1787227474_1_782.webp

 

ಕಾರ್ಯಕ್ರಮದಲ್ಲಿ ತರಬೇತುದಾರರಾದ ಹೆಚ್.ವೆಂಕಟೇಶ್ ಅವರು ತರಬೇತಿ ನೀಡಿದರು.

 

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಸೇರಿದಂತೆ ಜಿಲ್ಲಾ ನ್ಯಾಯಾಲಯದ ವಕೀಲರು, ಅಧಿಕಾರಿ- ಸಿಬ್ಬಂದಿ ವರ್ಗ ಹಾಗೂ ಪ್ಯಾರಾ ಲೀಗಲ್ ಸ್ವಯಂ ಸೇವಕರು ಉಪಸ್ಥಿತರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಬಳ್ಳಾರಿಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ ಕೆ ಶಿವಕುಮಾರ್ ಒತ್ತಾಯಯಾರಿಗೆ ಒಲೆಯುತ್ತೆ ಬಿಜೆಪಿ ಟಿಕೆಟ್ ರಾಜೀವ್ ಗಾಂಧಿ ಹಾದಿಯಲ್ಲಿ ರಾಹುಲ್ ಗಾಂಧಿ