LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಅಧ್ಯಾಪಕರ ವೇದಿಕೆಗೆ ಪದಾಧಿಕಾರಿಗಳ ಆಯ್ಕೆ

ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಅಧ್ಯಾಪಕರ ವೇದಿಕೆಯ 2025 ರಿಂದ 2027ನೇ ಸಾಲಿನ ಅವಧಿಗೆ ಹೊಸ ಕಾರ್ಯಕಾರಿ ಸಮಿತಿ ಆಯ್ಕೆಯಾಗಿದೆ.

 

ಅಧ್ಯಕ್ಷರಾಗಿ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ವೆಂಕಟೇಶ್ ಬಾಬು ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ದೇವರಾಜ್ ಅರಸ್ ಪ್ರಥಮ ದರ್ಜೆ ಕಾಲೇಜೀನ ಪ್ರೊ ದೇವೇಂದ್ರಪ್ಪ ಜಿ ಒ, ಖಜಾಂಚಿಯಾಗಿ ಸರ್ಕಾರಿ ಪ್ರಥಮ ದರ್ಜೆ  ಕಾಲೇಜು ದಾವಣಗೆರೆಯ   ಸಹ ಪ್ರಾಧ್ಯಾಪಕಿ ಪ್ರೊ   ಸುನಿತಾ ಕೆ.ಬಿ., ಉಪಾಧ್ಯಕ್ಷರಾಗಿ ಹರಿಹರ ಸರ್ಕಾರಿ ಕಾಲೇಜಿನ ಪ್ರೊ ಬಾಬು ಕೆ.  ಎ ಹಾಗೂ ಹಿರಿಯೂರಿನ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ ಅಣ್ಣಪ್ಪ ಡಿ ಅವರು ಆಯ್ಕೆಯಾಗಿದ್ದಾರೆ.

 

ಇವರುಗಳು ಮುಂದಿನ ಎರಡು ವರ್ಷಗಳ ಕಾಲ (2025–27) ವೇದಿಕೆಯನ್ನು ಮುನ್ನಡೆಸಲಿದ್ದಾರೆ.



ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಡಾ. ವೆಂಕಟೇಶ್ ಬಾಬು ಅವರು, “ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಅಧ್ಯಾಪಕರನ್ನೂ ಹಾಗೂ ವಾಣಿಜ್ಯ ಶಾಸ್ತ್ರ ವಿಷಯವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಕಾರ್ಯಗಳನ್ನು ಈ ವೇದಿಕೆಯ ಮೂಲಕ ಕೈಗೊಳ್ಳುವುದೇ ನಮ್ಮ ಮುಖ್ಯ ಗುರಿಯಾಗಿದೆ. ಉತ್ತಮ ಶೈಕ್ಷಣಿಕ ಚಟುವಟಿಕೆ ಹಾಗೂ ಗುಣಮಟ್ಟದ ಕಾರ್ಯಕ್ರಮಗಳನ್ನು ರೂಪಿಸುವ ಯೋಜನೆ ಹೊಂದಿದ್ದೇವೆ” ಎಂದು ಹೇಳಿದರು.

 

ಈ ಮೂಲಕ ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಅಧ್ಯಾಪಕರ ವೇದಿಕೆಯು ನವ ಚೈತನ್ಯದೊಂದಿಗೆ ಮುಂದಿನ ಅಧ್ಯಾಯವನ್ನು ಆರಂಭಿಸಿದೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ