LIVE TV StateNationalPoliticsCrimeEntertainmentSportsEducationFINANCE & TAXATION
Districts Yadagiri

ಸಾರ್ವಜನಿಕ ರಸ್ತೆ ಅತಿಕ್ರಮಣ ;ಕ್ರಮ ಕೈಗೊಳ್ಳುವಂತೆ ಪಿಡಿಓ ಗೆ ಮನವಿ

ಸುರಪುರ : ತಾಲೂಕಿನ ಕುರುಬನ ತಳ್ಳಳ್ಳಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

 

ಗ್ರಾಮದ ಸುಮಾರು 25 ಕ್ಕಿಂತ ಹೆಚ್ಚು ಜನ ಕಚಕನೂರ ಗ್ರಾಮ ಪಂಚಾಯಿತಿಗೆ ತೆರಳಿ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ಗ್ರಾಮದ ಮುಖ್ಯ  ಅಗಸಿಯ ಆಂಜನೇಯ ದೇವಸ್ಥಾನದಿಂದ ಕನ್ನೆಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ಸಿಸಿ ರಸ್ತೆ ಅತಿಕ್ರಮಣ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿರುವ ವ್ಯಕ್ತಿ ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗೆ ಒತ್ತಾಯಿಸಿದರು.

 

2024-25 ನೇ ಸಾಲಿನಲ್ಲಿ  ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದ್ದು ರಸ್ತೆಯ ಮೇಲೆ ಖಾಸಗಿ ವ್ಯಕ್ತಿಗಳಾದ ಬಸ್ಸಮ್ಮ ಗಂ/ ಚಂದಪ್ಪ ಕೋಳಿಹಾಳ ಮತ್ತು ಗೋಪರಡ್ಡಿ ಕಾಕರಗಲ್ಲ ಎಂಬುವ ವ್ಯಕ್ತಿಗಳು ರಸ್ತೆ ಅತಿಕ್ರಮಣ ಮಾಡಿ ಕಟ್ಟಡ ನಿರ್ಮಿಸಿದ್ದಾರೆ, ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಅತಿಕ್ರಮಣ ತೆರವುಗೊಳಿಸಬೇಕೆಂದು ಆಗ್ರಹಿಸಿದರು.

 

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ದೇವಿಂದ್ರಪ್ಪ ದೊರಿ,ಚನ್ನಗೌಡ ಚನ್ನೂರ, ಚಂದಪ್ಪ ಛಲವಾದಿ, ದೇವಿಂದ್ರಪ್ಪ ಕಚಕನೂರ, ಬಾಲಯ್ಯ ಕಡಿಮನಿ, ಚನ್ನಪ್ಪ ಆಲಗೂರ, ಮಲ್ಲಿಕಾರ್ಜುನ ದೇವಿಕೇರಿ, ಭೀಮಶಂಕರ ದೇವಿಕೇರಿ, ಸಾಬಣ್ಣ ಜಾಲಹಳ್ಳಿ, ದೇವಿಂದ್ರಪ್ಪ ಕಡಿಮನಿ, ರವಿಕಾಂತ ಕಡಿಮನಿ, ಅಪ್ಪಾಸಾಬ ಕಡಿಮನಿ, ಕರಿಬಸಪ್ಪಗೌಡ ಚನ್ನೂರ, ಶಿವಪ್ಪ ಕಡಿಮನಿ, ಪ್ರಭು ಕಚಕನೂರ ಸೇರಿದಂತೆ ಇತರರು ಇದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ