LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ಸಣ್ಣ ಮಳೆಗೂ ರಸ್ತೆ, ವಿವಿಧ ಪ್ರದೇಶಗಳು ಜಲಾವೃತ!

ಹಳೆ ತಹಶೀಲ್ದಾರ್ ಕಚೇರಿ ಬಳಿ ನಿಂತ ಮಳೆ ನೀರು | ಸಾರ್ವಜನಿಕರ ಪರದಾಟ | ಅಧಿಕಾರಿಗಳ ವಿರುದ್ಧ ಆಕ್ರೋಶ

ರಾಕೇಶ್.ವಿ

ಬಳ್ಳಾರಿ:  ಇತ್ತೀಚೆಗೆ ಬರ ಪರಿಸ್ಥಿತಿಯಿಂದಾಗಿ ಬಳ್ಳಾರಿ ನಗರದಲ್ಲಿ ಮಳೆ ಸುರಿಯುವುದೇ ಅಪರೂಪ. ಆದರೆ, ಅಪರೂಪಕ್ಕೆ ಸುರಿಯುವ ಮಳೆಯನ್ನೂ ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದ ಪರಿಸ್ಥಿತಿ ನಗರದ ಕೆಲವೆಡೆ ಕಂಡು ಬರುತ್ತಿದೆ. ಸಣ್ಣ ಮಳೆ ಬಂದರೂ ರಸ್ತೆಗಳು ಹಾಗೂ ಸರ್ಕಾರಿ ಕಚೇರಿಗಳ ಆವರಣದಲ್ಲಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಇದಕ್ಕೆ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಎದುರಿನ ಪ್ರದೇಶವೇ ಸಾಕ್ಷಿಯಾಗಿದೆ.

news_1790773765_2_572.webp

 

ನಗರದ ಮೋತಿ ಚಿತ್ರಮಂದಿರದ ಮುಂಭಾಗ ಹಾಗೂ ಹಳೆ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಳೆ ನೀರು ನಿಂತುಕೊಂಡಿದ್ದು, ಸಾರ್ವಜನಿಕರು ಓಡಾಡಲು ಪರದಾಡುವಂತಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಈ ಪ್ರದೇಶದಲ್ಲಿ ನೀರು ಸಂಗ್ರಹ ವಾಗಿದ್ದು, ಮರುದಿನವೂ ನೀರು ತೆರವಾಗದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

news_1790773764_1_818.webp

 

ಸರ್ಕಾರಿ ಕಚೇರಿಗಳಿಗೆ ಬರುವವರಿಗೇ ಸಂಕಷ್ಟ

ಹಳೆ ಜಿಲ್ಲಾಧಿಕಾರಿ ಕಚೇರಿ ಎದುರಿನ ಈ ಪ್ರದೇಶದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಉದ್ಯೋಗ ಕೇಂದ್ರ, ಪೊಲೀಸ್ ಠಾಣೆ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿನಿತ್ಯ ವಿವಿಧ ಕೆಲಸಗಳಿಗಾಗಿ ಸಾರ್ವಜನಿಕರು, ರೈತರು ಹಾಗೂ ಉದ್ಯೋಗಾಕಾಂಕ್ಷಿಗಳು ಈ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಆದರೆ, ಕಚೇರಿಗಳಿಗೆ ತೆರಳುವ ಮಾರ್ಗದಲ್ಲೇ ಮಳೆ ನೀರು ನಿಂತಿರುವುದರಿಂದ ಜನರು ನೀರಿನಲ್ಲಿಯೇ ನಡೆದು ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.

news_1790773764_0_604.webp

 

ವಿಶೇಷವಾಗಿ ವಯೋವೃದ್ಧರು, ಮಹಿಳೆಯರು ಹಾಗೂ ವಿವಿಧ ಕೆಲಸಗಳಿಗಾಗಿ ಕಚೇರಿಗಳಿಗೆ ಬರುವ ಸಾರ್ವಜನಿಕರು ನೀರು ನಿಂತಿರುವ ಪ್ರದೇಶವನ್ನು ದಾಟಲು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರಿ ಕಚೇರಿಗಳಿರುವ ಪ್ರದೇಶದಲ್ಲಿಯೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದಿರುವುದರಿಂದ ಸಣ್ಣ ಮಳೆಯಾದರೂ ನೀರು ಸಂಗ್ರಹವಾಗುತ್ತಿದೆ. ಮಳೆ ನಿಂತ ಬಳಿಕವೂ ನೀರು ತೆರವಾಗದೆ ಉಳಿಯುತ್ತಿರುವುದು ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗುತ್ತಿದೆ. ಈ ಸಮಸ್ಯೆಗೆ ತಾತ್ಕಾಲಿಕವಾಗಿ ನೀರು ತೆರವುಗೊಳಿಸುವುದಷ್ಟೇ ಪರಿಹಾರವಲ್ಲ; ನೀರು ನಿಲ್ಲದಂತೆ ಶಾಶ್ವತ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

news_1790773765_3_865.webp

 

ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ನಗರದಲ್ಲಿ ಅಪರೂಪಕ್ಕೆ ಸುರಿಯುವ ಮಳೆಯಲ್ಲಿಯೇ ಇಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದಕ್ಕೆ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಬರುವ ಜನರಿಗೆ ಕನಿಷ್ಠ ಸುಗಮ ಸಂಚಾರದ ವ್ಯವಸ್ಥೆಯನ್ನಾದರೂ ಕಲ್ಪಿಸಬೇಕೆಂಬುದು ಅವರ ಒತ್ತಾಯವಾಗಿದೆ.

ಸಮಸ್ಯೆ ಪ್ರತಿವರ್ಷವೂ ಮರುಕಳಿಸುವ ಮೊದಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಮಳೆ ನೀರು ನಿಲ್ಲಲು ಕಾರಣವೇನು ಎಂಬುದನ್ನು ಪತ್ತೆಹಚ್ಚಿ, ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕಚೇರಿಗಳಿಗೆ ಬರುವ ಸಾರ್ವಜನಿಕರು ಮಳೆ ನೀರಿನಲ್ಲಿಯೇ ಸಾಗುವ ಪರಿಸ್ಥಿತಿಗೆ ಮುಕ್ತಿ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 news_1790773765_4_192.webp

 

ಅಧಿಕಾರಿಗಳೇ ಇತ್ತ ಗಮನ ಹರಿಸಿ!

ಹಳೆ ಜಿಲ್ಲಾಧಿಕಾರಿ ಕಚೇರಿ ಎದುರಿನ ಪ್ರದೇಶದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕಿದೆ. ಕಚೇರಿಗಳಿಗೆ ಬರುವ ಜನರ ಅನುಕೂಲಕ್ಕಾಗಿ ತಕ್ಷಣವೇ ನೀರು ತೆರವುಗೊಳಿಸುವ ಕ್ರಮ ಕೈಗೊಳ್ಳುವುದರ ಜೊತೆಗೆ, ಮುಂದಿನ ದಿನಗಳಲ್ಲಿ ಮಳೆ ಬಂದಾಗ ನೀರು ನಿಲ್ಲದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ.

 

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ