LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಪ್ರತಿಯೊಬ್ಬರೂ ನಿತ್ಯ ದೇವರ ಪೂಜೆ ಮಾಡಿ - ಶ್ರೀ ಸುಬುಧೇಂದ್ರ ತೀರ್ಥರು

ಬಳ್ಳಾರಿ: ಪ್ರತಿಯೊಬ್ಬರೂ ನಿತ್ಯ ದೇವರ ಪೂಜೆ ಮಾಡಬೇಕು, ನಮ್ಮ ಧರ್ಮವನ್ನು ನಾವು ಕಾಪಾಡಲೇಬೇಕು, ನಮ್ಮ ಸಂಸ್ಕೃತಿ ಉಳಿಯಬೇಕು, ದೇವರು ನಮಗೇನು ಮಾಡಿಲ್ಲ ಎನ್ನುವ ಬದಲು ದೇವರಿಗೆ ನಾವೇನು ಮಾಡಿದ್ದೇವೆ? ಎನ್ನುವುದು ಮುಖ್ಯ. ಇದರಿಂದ ಎಲ್ಲರಿಗೂ ಒಳ್ಳೆಯದಾಗಲಿದೆ. ಮುದ್ರಾ ಧಾರಣೆಯಿಂದ ಸಕಲ ರೋಗಗಳು ದೂರವಾಗಲಿದ್ದು ಎಲ್ಲರೂ ಮುದ್ರೆ ಹಾಕಿಸಿಕೊಳ್ಳಬಹುದು ಎಂದು ಶ್ರೀ ಮನ್ಮಾಧ್ವಾಚಾರ್ಯ ಮೂಲ ಮಹಾಸಂಸ್ಥಾನ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದರು.

ಇಲ್ಲಿನ ಸತ್ಯನಾರಾಯಣ ಪೇಟೆ 1ನೇ ಕ್ರಾಸ್ ನಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಶ್ರೀಮಠಕ್ಕೆ ದಯ ಮಾಡಿಸಿದ ಶ್ರೀಗಳು ಶುಕ್ರವಾರ ಬೆಳಿಗ್ಗೆ ತಮ್ಮ ನೇತೃತ್ವದಲ್ಲಿ ಚಾತುರ್ಮಾಸ್ಯ ಹಿನ್ನೆಲೆ ಲೋಕಕಲ್ಯಾಣಾರ್ಥ ಶ್ರೀ ಸುದರ್ಶನ ಹೋಮ, ಭಕ್ತರಿಗೆ ತಪ್ತ ಮುದ್ರಧಾರಣೆ, ಸಂಸ್ಥಾನ ಪೂಜೆ, ಶ್ರೀ ಗುರುರಾಯರಿಗೆ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ, ಮಹಾನೈವೇದ್ಯ ಸೇರಿದಂತೆ ವಿವಿಧ ಪೂಜೆಗಳನ್ನು ವಿಜೃಂಭಣೆಯಿAದ ನೆರವೇರಿಸಿದ ಬಳಿಕ ಭಕ್ತರನ್ನುದ್ದೇಶಿಸಿ ಅವರು ಪ್ರವಚನ ನೀಡಿದರು.



 ನಮ್ಮ ಸಂಸ್ಕೃತಿ, ಪದ್ಧತಿಗಳನ್ನು ನಾವು ಪಾಲಿಸಬೇಕು, ನಾವು ನಮ್ಮ ಧರ್ಮವನ್ನು ಪಾಲಿಸಿದರೆ, ಧರ್ಮ ನಮ್ಮ ರಕ್ಷಿಸಲಿದೆ. ಶ್ರಾದ್ಧ ಕರ್ಮಾದಿ ಮಾಡಲು ಆರ್ಥಿಕವಾಗಿ ನಮ್ಮವರು ಸಮಸ್ಯೆ ಎದುರಿಸುತ್ತಿದ್ದರೆ, ಅಂತವರು ನಮ್ಮ ಮಠಕ್ಕೆ ಬಂದು ಉಚಿತವಾಗಿ ಮಾಡಿಕೊಳ್ಳುವ ವ್ಯವಸ್ಥೆಯಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಶ್ರೀರಾಘವೇಂದ್ರ ಸ್ವಾಮಿಗಳವರ ಮಠ ಭಕ್ತರ ಮಠವಾಗಿದೆ ಎಂದರು.

ಶ್ರೀಗಳ ಸಂಸ್ಥಾನ ಪೂಜೆ ವೀಕ್ಷಣೆಗೆ ಆಗಮಿಸಿದ ಸಾವಿರಾರು ಭಕ್ತರಿಗೆ ಅನುಕೂಲವಾಗುವಂತೆ ಎಲ್ ಇಡಿ ಪರದೆಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ನೆರೆದ ಭಕ್ತರು ಪೂಜೆ, ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಿ ಕಣ್ತುಂಬಿಕೊAಡು ತಮ್ಮ ಭಕ್ತಿಯನ್ನು ಸಮರ್ಪಿಸಿದರು.



ಶ್ರೀಮಠದ ಆಡಳಿತಾಧಿಕಾರಿ ಪಂ.ಪ್ರಸನ್ನಾಚಾರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನಂತರ ಎಲ್ಲ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ  ವಿವಿಧ ಮುಖಂಡರು, ಗಣ್ಯರು, ಶ್ರೀಮಠದ ಸಿಬ್ಬಂದಿಗಳು, ಭಕ್ತರು ಉಪಸ್ಥಿತರಿದ್ದರು. 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ