ನಾಯಕನಹಟ್ಟಿ: ಮೊಳಕಾಲ್ಮೂರು, ಕೂಡ್ಲಿಗಿ, ಸಂಡೂರು, ಕ್ಷೇತ್ರಗಳಲ್ಲಿ ಮಳೆ ಇಲ್ಲದೆ ಬರ ಪರೀಸ್ಥಿತಿ ಎದುರಿಸುತ್ತಿದೆ ಆದರೆ ನೀವು ಯಾಕೆ ಬರಪೀಡಿತ ಪ್ರದೇಶವೆಂದು ಮೊದಲನೇ ಪಟ್ಟಿಯಲ್ಲಿ ಘೋಷಣೆ ಮಾಡಲಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ಎಸ್.ತಿಪ್ಪೇಸ್ವಾಮಿ ಆಕ್ರೋಷವ್ಯಕ್ತಪಡಿಸಿದರು.
ನಾಯಕನಹಟ್ಟಿ ಪಟ್ಟಣದ ಶುಕ್ರವಾರ ಪತ್ರಿಕೆ ಗೋಷ್ಠಿಯಲ್ಲಿ ಮಾತನಾಡಿದ ಅವರು ಮೇಲಿನ 3 ಕ್ಷೇತ್ರಗಳಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಜನರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಕೆಲಸ ಇಲ್ಲದೆ ಅನೇಕ ಜನರು ವಲಸೆ ಹೋಗುತ್ತಿದ್ದಾರೆ. ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಜನರು ಕಾಂಗ್ರೆಸ್ ಪಕ್ಷ ಅವರನ್ನು ದ್ರೋಹ ಎಸಗುತ್ತಿದ್ದಾರೆ. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಮಂತ್ರಿಗಳೇ ಭಧ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಮಾಡಿ ಗೋ-ಶಾಲೆ ತೆರೆಯಿರಿ ಮೇವು ಕೊಡುವಂತಹ ಕೆಲಸ ಮಾಡಿ ಎಂದು ತಿಳಿಸಿದರು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದ0ತಹ ಕ್ಷೇತ್ರ ರೈತರು ತೀವ್ರ ಸಂಕಷ್ಠಕ್ಕೆ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ರೈತರ ಆರ್ಥಿಕ ಪರೀಸ್ಥಿತಿ ಎದುರಾಗಿದೆ. ಬೆಳೆ ಕೈಗೆ ಸಿಗುವುದು ಅನುಮಾನವಾಗಿದೆ. ಅಂತಹ ಮೊಳಕಾಲ್ಮೂರು ಕ್ಷೇತ್ರವನ್ನು ಬರಪೀಡಿತ ಪ್ರದೇಶ ಎಂದು ಪರಿಗಣಿಸಿದೇ ಸರ್ಕಾರ ನಿರ್ಲಕ್ಷ ವಹಿಸಿದೆ. ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆಯಲ್ಲಾ ಯಾಕೆ ಮೊಳಕಾಲ್ಮೂರು ಕ್ಷೇತ್ರ ಬರಪೀಡಿತ ಪ್ರದೇಶವೆಂದು ಘೋಷಿಸಿಲ್ಲ ಎಂದು ಪ್ರಶ್ನಿಸಿದರು. ಮೊಳಕಾಲ್ಮೂರು, ಕೂಡ್ಲಿಗಿ, ಸಂಡೂರು, ಕ್ಷೇತ್ರಗಳಲ್ಲಿ ಸಾವಿರಾರು ಎಕರೆ ಪ್ರದೇಶಗಳಲ್ಲಿ ಬೆಳೆ ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದರು ರಾಜ್ಯ ಸರ್ಕಾರ ಘೋಷಿಸಿರುವ ಬರಪೀಡಿತ ಪಟ್ಟಿಯಲ್ಲಿ ಯಾವುದೇ ಕ್ಷೇತ್ರಗಳನ್ನು ಸೇರ್ಪಡೆ ಮಾಡದಿರುವುದು ಖಂಡನೀಯ ಎಂದು ಆಕ್ರೋಷ ವ್ಯಕ್ತಪಡಿಸಿದರು. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರು ಆದರೆ ಬರಗಾಲ ಘೋಷಣೆ ಮಾಡುವ ಸಂದರ್ಭದಲ್ಲಿ ಕ್ಷೇತ್ರವನ್ನು ಕಡೆಗಣಿಸುವುದು ರೈತರಿಗೆ ಮಾಡಿರುವ ಅನ್ಯಾಯವಾಗಿದೆ. ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣರವರೆ ನೀವು ಕಾಂಗ್ರೆಸ್ ಪಕ್ಷಕ್ಕೆ ಒತ್ತಡ ಏರಿ ಬರಗಾಲ ಪ್ರದೇಶ ಎಂದು ಘೋಷಣೆ ಮಾಡಿಸಬೇಕೆಂದು ಹೇಳಿದರು.