LIVE TV StateNationalPoliticsCrimeEntertainmentSportsEducationFINANCE & TAXATION
Districts

ಸಮರ್ಪಕವಾಗಿ ಸಿಗದ ಗೊಬ್ಬರ ರೈತರ ಪರದಾಟ.

ಅರಕೇರಾ : ತಾಲ್ಲೂಕಿನಲ್ಲಿ ರೈತರಿಗೆ ಸಂಮರ್ಪಕವಾಗಿ ಯೂರಿಯಾ ಗೊಬ್ಬರ ದೊರೆಯುತ್ತಿಲ್ಲ ಹಾಗೂ ಸರ್ಕಾರದ ದರಕ್ಕಿಂತ ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಶ ನಾಯಕ ಸರಗಿನ ಆರೋಪಿಸಿದರು.

ಪಟ್ಟಣದ ನಮ್ಮ ಗ್ರೋಮರ್ ಕೇಂದ್ರದ ಎದುರು ರೈತರೊಂದಿಗೆ ಪ್ರತಿಭಟನೆ  ಮಾಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ‌ ಅವರು, ರೈತರಿಗೆ ಸರಿಯಾಗಿ ಗೊಬ್ಬರ ದೊರೆಯುತ್ತಿಲ್ಲ. ತಾಲ್ಲೂಕಿನಲ್ಲಿ ಸೊಸೈಟಿ ಹಾಗೂ ಖಾಸಗಿ ರಸಗೊಬ್ಬರ ಮಾರಾಟ ಅಂಗಡಿಯವರು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು. 



ಕೆಲ ಅಂಗಡಿಗಳಲ್ಲಿ ಗೊಬ್ಬರದ ದರಪಟ್ಟಿ ಹಾಕಿದ್ದರು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಅಲ್ಲದೆ ಅಗತ್ಯವಿರುವ ಡಿಎಪಿ‌ ಗೊಬ್ಬರದ ಜತೆಗೆ ಬೆರೆ ಗೊಬ್ಬರವನ್ನು ಕಡ್ಡಾಯವಾಗಿ ಖರೀದಿ ಮಾಡಲೇಬೇಕು ಇಲ್ಲದಿದ್ದರೆ ಡಿಎಪಿ ಗೊಬ್ಬರ ಕೊಡುವುದಿಲ್ಲ ಎಂದು ಖಡಾಖಂಡಿತವಾಗಿ ರೈತರಿಗೆ ‌ಹೇಳುತ್ತಿದ್ದಾರೆ ಎಂದು ತಿಳಿಸಿದರು.

ರೈತರಿಗೆ ಸಮರ್ಪಕವಾಗಿ ಅಗತ್ಯವಾದ ಗೊಬ್ಬರ ನೀಡದಿದ್ದರೆ ಹಾಗೂ ಹೆಚ್ಚಿನ ದರಕ್ಕೆ‌ ಮಾರಾಟ ಮಾಡಿದರೆ ಸಂಬಂಧಿಸಿದ ಕೃಷಿ ಇಲಾಖೆ ಎದುರು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. 

ಸುತ್ತಲಿನ ರೈತರು ಹಾಗೂ ರೈತ ಸಂಘದ ಮುಖಂಡರು ಭಾಗವಹಿಸಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ