LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

ಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ

ಬೆಂಗಳೂರು: ಶ್ರೀ ರೇವಣ ಸಿದ್ಧೇಶ್ವರ ಎಜುಕೇಶನ್ ಟ್ರಸ್ಟ್ (ರಿ.) ನ ಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾ, ಚೊಕ್ಕನಹಳ್ಳಿ, ಚಿಕ್ಕಜಾಲ, ಬೆಂಗಳೂರು ಸಂಸ್ಥೆಯಲ್ಲಿ ಬಿ.ಎ.ಎಲ್.ಎಲ್.ಬಿ ಮತ್ತು ಎಲ್.ಎಲ್.ಬಿ  ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ "ಕನ್ನಡ ಕಲರವ" ಕನ್ನಡ ರಾಜ್ಯೋತ್ಸವ   ಆಯೋಜಿಸಲಾಗಿತ್ತು. 

 

​ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ  ​ಡಾ. ಸುದರ್ಶನ್ ಕುಮಾರ್. ಡಿ, ಪ್ರಾಂಶುಪಾಲರು, ಎ.ಪಿ.ಎಸ್ ಸಂಜೆ ಪದವಿ ಕಲಾ ಮತ್ತು ವಾಣಿಜ್ಯ ಕಾಲೇಜು, ಸಮುದಾಯ ರಂಗ ತಂಡ ಕಲಾವಿದರು ಹಾಗೂ ಸಂಪನ್ಮೂಲ ವ್ಯಕ್ತಿ-ಶಿಕ್ಷಣ ಹಾಗೂ ಸಂಸ್ಥೃತಿ ಅಧ್ಯಯನ. ಇವರು ಭಾಷೆಯ ಮಹತ್ವ, ಅಧ್ಯಯನದಲ್ಲಿ ಭಾಷೆಯ ಪಾತ್ರ ಮತ್ತು ಸಂಸ್ಕೃತಿ-ಭಾಷೆಯ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಪ್ರೇರಣಾದಾಯಿಕ ಉಪನ್ಯಾಸ ನೀಡಿದರು. 

 

​ನಾರಾಯಣ್ ಜಿ., ವಕೀಲರು, ಬೆಂಗಳೂರು. ಇವರು ಕಾನೂನು ವೃತ್ತಿಯ ಮೌಲ್ಯಗಳು, ನಿಯಮಗಳು ಮತ್ತು ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. 

 

​ಪ್ರೊಫೆಸರ್ ಬೋರೇಗೌಡ, ವಿ.ವಿ.ಪುರಂ ಕಾನೂನು ಕಾಲೇಜು, ಬೆಂಗಳೂರು. ಇವರು ಇಂಗ್ಲಿಷ್ ಮಾಧ್ಯಮದ ಶಿಕ್ಷಣದ ನಡುವೆ ಕನ್ನಡ ಮಾಧ್ಯಮದ ಮಕ್ಕಳು ಅನುಭವಿಸುವ ಸವಾಲುಗಳು ಮತ್ತು ಸಮಸ್ಯೆಗಳ ಕುರಿತು ಮಾತನಾಡಿ, ಅವುಗಳನ್ನು ಧೈರ್ಯವಾಗಿ ಎದುರಿಸಲು ಪ್ರೋತ್ಸಾಹಿಸಿದರು. 

 

 news_1793679015_0_610.webp

 

​ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಆರ್. ಕೃಷ್ಣಪ್ಪ, ಮಾಜಿ ಸಚಿವರು, ಜನ ಸೇವಕರು ಹಾಗೂ ಅಧ್ಯಕ್ಷರು ಕೆ.ಪಿ.ಸಿ.ಸಿ.ಮುಖಂಡರು, ಶ್ರೀ ರೇವಣ ಸಿದ್ಧೇಶ್ವರ ಎಜುಕೇಶನ್ ಟ್ರಸ್ಟ್ ವಹಿಸಿದ್ದರು. 

 

 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ  ಆರ್. ಕೃಷ್ಣಪ್ಪ ಹಾಗೂ ಇತರ ಅತಿಥಿ ಗಣ್ಯರು ಬಹುಮಾನ ವಿತರಿಸಿದರು.

​ಶ್ರೀ ಕೇಶವ್ ಕೃಷ್ಣಪ್ಪ, ನಿರ್ದೇಶಕರು, ಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾ.  ​ಡಾ. ಎಂ.ಆರ್. ಶಿವಕುಮಾರ್, ಪ್ರಾಂಶುಪಾಲರು,  ರೇವಣ ಸಿದ್ಧೇಶ್ವರ ಇನ್ಸ್ಟಿಟ್ಯೂಟ್ ಆಫ್ ತಂತ್ರಜ್ಞಾನ. 

​ ರಮ್ಯಾ ಎ.ಎಸ್., ಸಹಾಯಕ ಪ್ರಾಧ್ಯಾಪಕರು ಮತ್ತು ಪ್ರಾಂಶುಪಾಲರು,  ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾ. ಮುಂತಾದ  ಗಣ್ಯರು ಉಪಸ್ಥಿತರಿದ್ದರು

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ