LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ವಾಸವಿ ಶಿಕ್ಷಣ ಸಮೂಹ ಸಂಸ್ಥೆಯಿಂದ ಫ್ರೆಶರ್ಸ್ ಡೇ ಆಚರಣೆ

ವಿದ್ಯಾವಂತ ಸಮಾಜದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಡಿ.ಆರ್.ವಿಜಯಸಾರಥಿ

ವಿಜಯನಗರ : ವಿಜಯನಗರ ವಾಸವಿ ಶಿಕ್ಷಣ ಸಂಸ್ಥೆಗಳ ಸಮೂಹದಿಂದ 2025-26ಸಾಲಿನಲ್ಲಿ ಪಿ.ಯು.ಸಿ. ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಲು  ಫ್ರೆಶರ್ಸ್ ಡೇ ಆಚರಿಸಲಾಯಿತು.

ವಾಸವಿ ಶಿಕ್ಷಣ ಸಂಸ್ಥೆಗಳ ಸಮೂಹದ ಗೌರವ ಕಾರ್ಯದರ್ಶಿ ಡಿ.ಆರ್.ವಿಜಯಸಾರಥಿ. ಹಾಸ್ಯನಟರುಗಳಾದ ರಾಘವೇಂದ್ರ, ಹುಲಿ ಕಾರ್ತಿಕ್ ಮತ್ತು ಪ್ರಾಂಶುಪಾಲರಾದ ಪದ್ಮಾ,   ಸೌಭಾಗ್ಯ, ಡಾ.ರಂಗಸ್ವಾಮಿ, ರಚನಾ ದೀಪ ಫ್ರೆಶರ್ಸ್ ಡೇ ಉದ್ಘಾಟಿಸಿದರು. ದ್ವೀತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಸನ್ಮಾನಿಸಲಾಯಿತು



ಡಿ.ಆರ್.ವಿಜಯಸಾರಥಿ ಮಾತನಾಡಿ, ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ಕೆ.ಜಿ.ಯಿಂದ ಪಿ.ಜಿ.ವರಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಗುಣಮಟ್ಟದ ಶಿಕ್ಷಣದ ಜೊತೆಗೆ ಕಲಿಕೆ ನಂತರ ನಮ್ಮ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೃಹತ್ ಉದ್ಯೋಗ ಮೇಳಗಳನ್ನು  ಆಯೋಜಿಸಿ ಈ ವರೆಗೆ 5000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಟ್ಟಿದ್ದೇವೆ. ವಾಸವಿ ಶಿಕ್ಷಣ ಸಂಸ್ಥೆಯನ್ನು ಮನೆಯ ವಾತವರಣದಂತೆ ರೂಪಿಸಲಾಗಿದೆ. ಎಂದರು.

ನಲಿ-ಕಲಿ ವಾತಾವರಣದಲ್ಲಿ ಒತ್ತಡವಿಲ್ಲದೆ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳು ಶಿಕ್ಷಣದ ಮಹತ್ವ ಅರಿಯಬೇಕು. ವಿದ್ಯಾವಂತ ಸಮಾಜ ನಿರ್ಮಾಣ ಮಾಡಬೇಕು, ಶಿಕ್ಷಣ ಪಡೆದಾಗ ಜ್ಞಾನ ಮತ್ತು ಅರಿವು ಮೂಡುತ್ತದೆ. ವಿದ್ಯಾವಂತ ಸಮಾಜದಿಂದ ಮಾತ್ರ ದೇಶ ಅಭಿವೃದ್ದಿ ಸಾಧ್ಯ ಎಂದು ಹೇಳಿದರು.

 

ಹಾಸ್ಯನಟ ರಾಘವೇಂದ್ರ ಮಾತನಾಡಿ, ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ತಿಳಿಯಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಮತ್ತೊಬ್ಬರ ಕಲಿಕೆಗೆ ನೆರವಾಗಬೇಕು. ಜ್ಞಾನವನ್ನು ಹಂಚಬೇಕು ಎಂದರು.



ಹುಲಿ ಕಾರ್ತಿಕ್ ಮಾತನಾಡಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವವರು  ಬೆಳಗ್ಗೆ ಕೆಲಸ ಮಾಡಿ ಸಂಜೆ ಕಾಲೇಜಿಗೆ ಹೋಗುವ ಅವಕಾಶವಿದೆ. ವಿದ್ಯೆ ಎಷ್ಟು ಮುಖ್ಯ ಎಂಬುದನ್ನು ಮಕ್ಕಳಿಗೆ ತಿಳಿಸಬೇಕು. ಎಲ್ಲ ಕಳೆದುಹೋಗಬಹುದು, ವಿದ್ಯೆ ಮಾತ್ರ ಶಾಶ್ವತವಾಗಿ ಇರುತ್ತದೆ. ಪುಸ್ತಕ ಓದುವುದು, ಸಂಗೀತ ಮತ್ತು ಮಹನೀಯರುಗಳ ಸಾಧಕರ ವಿಷಯಗಳನ್ನು ಮಕ್ಕಳಿಗೆ ತಿಳಿಸಿಕೊಡಿ ಎಂದು ಕರೆ ನೀಡಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ