LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಹೊಸಪೇಟೆಗೆ ಜಿ.ಪಲ್ಲವಿ ಆಗಮನ

ವಿಜಯನಗರ (ಹೊಸಪೇಟೆ): ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಅವರು ಹೊಸಪೇಟೆಗೆ ಆಗಮಿಸಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಬಿ.ಎಸ್.ಸುಹಾಸ್ ತಿಳಿಸಿದ್ದಾರೆ.

 

ಆ.19 ರಂದು ಸಂಜೆ 5 ಗಂಟೆಗೆ ಹೊಸಪೇಟೆ ನಗರದ ಮೇದಾರ ಓಣಿಯಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ ಮೇದಾರ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.

 

ಆ. 20 ರಂದು ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯಗಳ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ  ಹಾಗೂ ಕುಂದು ಕೊರತೆಗಳನ್ನು ಆಲಿಸಿ ಬೆ.10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆ.11 ಗಂಟೆಗೆ ಕಮಲಾಪುರದ ಹಂಪಿ ವಿಶ್ವವಿದ್ಯಾಲಯದಲ್ಲಿ ವಿಜಯನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯಗಳ 'ಸಮಸ್ಯೆ, ಸವಾಲುಗಳು ಮತ್ತು ಪರಿಹಾರೋಪಾಯಗಳ' ಕುರಿತು ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ.



ಮಧ್ಯಾಹ್ನ 3 ಗಂಟೆಗೆ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮುದಾಯದ ಸಂಘಸಂಸ್ಥೆಗಳ ಮತ್ತು ಸಾಮಾನ್ಯ ಅಲೆಮಾರಿ ಸಮುದಾಯದ ಜನರಿಂದ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕಾರ. ಮಧ್ಯಾಹ್ನ 3:30 ಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಹಾಗೂ ಸಮಾಲೋಚನೆ ಸಭೆ. ಸಂಜೆ 5:30 ಕ್ಕೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ