LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Bellary

ಬರ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರದ ಬದ್ಧತೆ, ಗ್ಯಾರಂಟಿ ಯೋಜನೆಗಳ ಪ್ರಗತಿ ಅನಾವರಣ

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಳ್ಳಾರಿಯ ಪಾತ್ರ ಅನನ್ಯ: ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ*

ಬಳ್ಳಾರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಬಳ್ಳಾರಿ: ಭಾರತದ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಬಳ್ಳಾರಿ ಜಿಲ್ಲೆಯ ಕೊಡುಗೆ ಅವಿಸ್ಮರಣೀಯ. ಬ್ರಿಟಿಷ್ ಆಳ್ವಿಕೆಯ ವಿರುದ್ಧ ಧ್ವನಿ ಎತ್ತಿದ ಕಲ್ಯಾಣ ಕರ್ನಾಟಕದ ಈ ಐತಿಹಾಸಿಕ ನೆಲ, ದಕ್ಷಿಣ ಭಾರತದಲ್ಲಿ ಸ್ವಾತಂತ್ರ‍್ಯ ಸಂಗ್ರಾಮದ ಪ್ರಮುಖ ಕೇಂದ್ರವಾಗಿ ಕ್ರಾಂತಿಯ ಕಿಚ್ಚನ್ನು ಹೊತ್ತಿಸಿತ್ತು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.

            ಜಿಲ್ಲಾಡಳಿತದ ವತಿಯಿಂದ ನಗರದ ಬಿಎಂಸಿಆರ್‌ಸಿ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

            ಬಳ್ಳಾರಿಯ ಜನತೆ ತೋರಿದ ತ್ಯಾಗ, ಬಲಿದಾನ ಮತ್ತು ಹೋರಾಟದ ಕಿಚ್ಚು ಕರ್ನಾಟಕದ ಹಾಗೂ ಭಾರತದ ಸ್ವಾತಂತ್ರö್ಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಉಳಿಯುವಂತಹದ್ದು. 1921 ರಲ್ಲಿ ಮಹಾತ್ಮಾ ಗಾಂಧೀಜಿಯವರು ಬಳ್ಳಾರಿಗೆ ಭೇಟಿ ನೀಡಿದ್ದನ್ನು ಹಾಗೂ 1932ರಲ್ಲಿ ಸಂಡೂರಿನ ಯಶವಂತರಾವ್ ಹಿಂದೂರಾವ್ ಘೋರ್ಪಡೆಯವರು ಹರಿಜನರಿಗೆ ದೇವಾಲಯ ಪ್ರವೇಶ ಕಲ್ಪಿಸಿ ಅಸ್ಪೃಶ್ಯತೆ ನಿವಾರಣೆಗೆ ನಾಂದಿ ಹಾಡಿದ್ದನ್ನು ಉಲ್ಲೇಖಿಸಿದ ಅವರು, ಈ ಐತಿಹಾಸಿಕ ನಡೆಯಿಂದ ಪ್ರೇರಿತರಾಗಿ 1934ರಲ್ಲಿ ಗಾಂಧೀಜಿಯವರು ಸಂಡೂರಿಗೆ ಭೇಟಿ ನೀಡಿದ್ದರು. ಐತಿಹಾಸಿಕ ಅಲಿಪುರ ಜೈಲಿನಲ್ಲಿ ಸಿ. ರಾಜಗೋಪಾಲಚಾರಿ ಸೇರಿದಂತೆ ಅನೇಕ ಮಹಾನ್ ನಾಯಕರು ಸೆರೆವಾಸ ಅನುಭವಿಸಿದ್ದರು ಎಂದು ನೆನೆದರು.

news_1786791514_3_321.webp

 

ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ:

            ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಬಳ್ಳಾರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ತಲುಪಿದ್ದು, ದೇಶದ ಇತರ ರಾಜ್ಯಗಳಿಗೂ ಮಾದರಿಯಾಗಿವೆ. ಶಕ್ತಿ ಯೋಜನೆಯಡಿ ಜುಲೈ 31 ರವರೆಗೆ ಜಿಲ್ಲೆಯಲ್ಲಿ 8.02 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಸರ್ಕಾರ ರೂ.323.29 ಕೋಟಿ ವೆಚ್ಚ ಭರಿಸಿದೆ. 9,500 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಹಸಿವು ಮುಕ್ತ ಅಭಿಯಾನದಡಿ ಜಿಲ್ಲೆಯ 10,35,434 ಫಲಾನುಭವಿಗಳಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ತಲುಪಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಮೇ-2026 ರ ಅಂತ್ಯಕ್ಕೆ 2,85,403 ಫಲಾನುಭವಿಗಳಿಗೆ ರೂ.2000/- ರಂತೆ ಒಟ್ಟು ರೂ. 57,08,06,000/- (ರೂಪಾಯಿ. ಐವತ್ತೇಳು ಕೋಟಿ ಎಂಟು ಲಕ್ಷದ ಆರು ಸಾವಿರ) ಮೊತ್ತವನ್ನು ಫಲಾನುಭವಿಗಳಿಗೆ ಪಾವತಿಸಲಾಗಿರುತ್ತದೆ. ಒಟ್ಟು ಆಗಸ್ಟ-2023 ರಿಂದ ಮೇ-2026 ರ ಅಂತ್ಯಕ್ಕೆ ಒಟ್ಟು ರೂ. 1713.07/- ಕೋಟಿ (ಒಂದು ಸಾವಿರದ ಏಳುನೂರ ಹದಿಮೂರು ಕೋಟಿ ಏಳು ಲಕ್ಷ) ಗಳನ್ನು ಫಲಾನುಭವಿಗಳಿಗೆ ಪಾವತಿಸಲಾಗಿರುತ್ತದೆ.

 ಅದೇರೀತಿಯಾಗಿ ಗೃಹಜ್ಯೋತಿ ಯೋಜನೆಯಡಿ 2,99,249 ಮನೆಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸಲಾಗಿದ್ದು, ಇದಕ್ಕಾಗಿ ರೂ.509.28 ಕೋಟಿ ಅನುದಾನ ಬಳಕೆಯಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯ 13,414 ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾಧಾರಿಗಳಿಗೆ ಒಟ್ಟು ರೂ.35.33 ಕೋಟಿ ಭತ್ಯೆ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಾಹಿತಿ ನೀಡಿದರು.

ಬರ ಪರಿಸ್ಥಿತಿ: ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯ:

            ಮುಂಗಾರು ಮಳೆ ಕೊರತೆಯಿಂದಾಗಿ ಜಿಲ್ಲೆಯ 1,59,542 ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಕೇವಲ ಶೇ.42 ರಷ್ಟು (67,000 ಹೆಕ್ಟೇರ್) ಮಾತ್ರ ಬಿತ್ತನೆಯಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಬಳ್ಳಾರಿ, ಸಂಡೂರು, ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ ಎಂದರು.

            ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 90 ಟಿ.ಎಂ.ಸಿ. ನೀರು ಸಂಗ್ರಹವಿದ್ದು, ಕುಡಿಯುವ ನೀರು ಮತ್ತು ಕೃಷಿಗೆ ಸಮರ್ಪಕವಾಗಿ ಬಳಸಲು ಆದ್ಯತೆ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ನಗರದಲ್ಲಿ 72 ಹಾಗೂ ಗ್ರಾಮೀಣ ಭಾಗದಲ್ಲಿ 158 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ. ಜಾನುವಾರುಗಳ ಹಿತದೃಷ್ಟಿಯಿಂದ 40 ಸಾವಿರ ಮೇವಿನ ಮಿನಿಕಿಟ್‌ಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಗ್ರಾಮೀಣ ಭಾಗದ ಜನ ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಖಾತ್ರಿ ಯೋಜನೆಯಡಿ ವ್ಯಾಪಕ ಕೆಲಸ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

            ಇತ್ತೀಚೆಗೆ ಹಲಕುಂದಿ, ಮಿಂಚೇರಿ, ವಿಠಾಲಪುರ, ಮೆಟ್ರಿ, ಸಿದ್ದರಾಂಪುರ ಮುಂತಾದ ಗ್ರಾಮಗಳ ಕೃಷಿ ಜಮೀನುಗಳಿಗೆ ಖುದ್ದು ಭೇಟಿ ನೀಡಿ ತೊಗರಿ, ಹತ್ತಿ, ಸಜ್ಜೆ ಹಾಗೂ ಸೂರ್ಯಕಾಂತಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಲಾಗಿದ್ದು, ರೈತರಿಗೆ ಯಾವುದೇ ತೊಂದರೆಯಾಗದAತೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಸಕ್ತ ಎದುರಾಗಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ವಿಸ್ತೃತ ಚಿತ್ರಣ ನೀಡಿದರು.

news_1786791515_6_620.webp

 

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದ ಬದ್ಧತೆ:

            ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ರಾಜ್ಯದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಪರಿಹಾರ, ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಸಮಗ್ರ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಸೂಚಿಯನ್ನು ರೂಪಿಸಲಾಗಿದೆ. ಆಡಳಿತವನ್ನು ಜನತೆಯ ಮನೆಬಾಗಿಲಿಗೆ ಕೊಂಡೊಯ್ಯುವ ಜೊತೆಗೆ ಯುವಜನತೆ, ಶ್ರಮಿಕರು ಹಾಗೂ ರೈತರ ಸಬಲೀಕರಣಕ್ಕೆ ಹಲವು ವಿನೂತನ ಯೋಜನೆಗಳನ್ನು ಘೋಷಿಸಿದ್ದಾರೆ ಎಂದು ತಿಳಿಸಿದರು.

ಪ್ರಜಾಸೇವೆ ಆಂದೋಲನ:

            ಮನೆಬಾಗಿಲಿಗೆ ಆಡಳಿತ ಸಾರ್ವಜನಿಕರ ಕುಂದುಕೊರತೆಗಳನ್ನು ಸಕಾಲದಲ್ಲಿ ಪರಿಹರಿಸಲು ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತಿ ತಿಂಗಳ ಎಲ್ಲ ಶನಿವಾರಗಳಂದು ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಯುವಶಕ್ತಿ, ಶಿಕ್ಷಣ ಮತ್ತು ಉದ್ಯೋಗ ಕ್ರಾಂತಿ:

            ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯ ಬೆಳೆಸಲು ಗ್ರಾ.ಪಂ. ಮತ್ತು ನಗರ ವಾರ್ಡ್ಗಳಲ್ಲಿ ಒಟ್ಟು 10,000 ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ. ಪ್ರತಿ ಸಂಘಕ್ಕೆ ತಲಾ ರೂ.10 ಲಕ್ಷದಂತೆ ಒಟ್ಟು ರೂ.1000 ಕೋಟಿ ಅನುದಾನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

            ಬಳ್ಳಾರಿಯಲ್ಲಿ ಅಪರೇಲ್ ಜೀನ್ಸ್ ಪಾರ್ಕ್ಗಾಗಿ ಕೆಐಎಡಿಬಿ ಮೂಲಕ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಎಂದು ಹೇಳಿದರು.

news_1786791516_9_692.webp

 

 

ಕೆಎಂಇಆರ್‌ಸಿ ವತಿಯಿಂದ ಬಳ್ಳಾರಿ ಜಿಲ್ಲೆಗೆ ರೂ.2,000 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕೊಡುಗೆ

            ಕರ್ನಾಟಕ ಗಣಿ ಪರಿಸರ ಪುನಶ್ವೇತನ ನಿಗಮದ ಮೂಲಕ ಬಳ್ಳಾರಿಯ ಗಣಿ ಪೀಡಿತ ಪ್ರದೇಶಗಳ ಪುನಶ್ಚೇತನಕ್ಕೆ ಬೃಹತ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬಿಎಂಸಿಆರ್‌ಸಿ ಯಲ್ಲಿ ರೂ. 331 ಕೋಟಿ ವೆಚ್ಚದಲ್ಲಿ 200 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ, ಲೀನಿಯರ್ ಆಕ್ಸಿಲರೇಟರ್ ಸ್ಥಾಪನೆ, ಸಂಡೂರಿನಲ್ಲಿ 250 ಹಾಸಿಗೆಗಳ ಆಸ್ಪತ್ರೆ ಮತ್ತು ರಕ್ತ ಬ್ಯಾಂಕ್ ಸ್ಥಾಪನೆ, ರೂ.285 ಕೋಟಿ ವೆಚ್ಚದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 36 ವಸತಿ ನಿಲಯಗಳು, 243 ಶಾಲೆಗಳ ಉನ್ನತೀಕರಣ, 1.3 ಲಕ್ಷ ಮಕ್ಕಳಿಗೆ ಪೌಷ್ಟಿಕ ಆಹಾರ ಕಾರ್ಯಕ್ರಮಗಳು, ಗ್ರಾಮೀಣ ಹಾಗೂ ತಾಲೂಕು ಮಟ್ಟದಲ್ಲಿ ಗ್ರಂಥಾಲಯಗಳ ಸ್ಥಾಪನೆ, ಗ್ರಾಮೀಣ ಸಂಪರ್ಕ ರಸ್ತೆಗಳ ಕಾಮಗಾರಿಗಾಗಿ ರೂ.200 ಕೋಟಿ, ಕೆರೆಗಳ ಪುನರುಜ್ಜೀವನ ಮತ್ತು ಅಭಿವೃದ್ಧಿಗೆ ರೂ.337 ಕೋಟಿ, ಸಾವಿರಾರು ಬಡ ಕುಟುಂಬಗಳಿಗೆ ಆಸರೆಯಾಗಲು ರೂ.633 ಕೋಟಿ ವೆಚ್ಚದ ವಸತಿ ಯೋಜನೆ, ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ.238 ಕೋಟಿ, 73,500 ಹೆಕ್ಟೇರ್‌ಗೂ ಅಧಿಕ ಪ್ರದೇಶ ವ್ಯಾಪ್ತಿಯಲ್ಲಿ ಜಲಾನಯನ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯೋಗ ಮತ್ತು ಪ್ರವಾಸೋದ್ಯಮ:

            ಜಿಲ್ಲೆಯಲ್ಲಿ ರೂ.55 ಕೋಟಿ ವೆಚ್ಚದಲ್ಲಿ ‘ಬೆಂಗಳೂರು ಜೈವಿಕ ನವೋದ್ಯಮ ಕೇಂದ್ರ' ಸ್ಥಾಪನೆ,  ಕೈಗಾರಿಕಾ ತರಬೇತಿ ಸಂಸ್ಥೆಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸುವಿಕೆ, ಸಂಡೂರು ತಾಲೂಕಿನಲ್ಲಿ ಪ್ರಸ್ತಾವಿತ ‘ಮೆಗಾ ಸ್ಕಿಲ್ ಅಕಾಡೆಮಿ’ ಸ್ಥಾಪನೆಯ ಮೂಲಕ ಯುವಜನತೆಗೆ ಕೌಶಲ್ಯ ತರಬೇತಿ ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳು, ಪ್ರಸಿದ್ಧ ದರೋಜಿ ಕರಡಿ ಧಾಮ ಹಾಗೂ ಸಂಗನಕಲ್ಲು ಪ್ರದೇಶಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಜಿಲ್ಲಾಡಳಿತದ ಮಹತ್ವದ ಸಾಧನೆ:

            ಬಳ್ಳಾರಿ ನಗರದ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ ಪ್ರಕ್ರಿಯೆ ಹಮ್ಮಿಕೊಂಡಿದ್ದು, ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 14 ಕಾರ್ಯಾಚರಣೆಗಳ ಮೂಲಕ ರೂ.551.25 ಕೋಟಿ ಮೌಲ್ಯದ 126 ಎಕರೆ ಒತ್ತುವರಿ ಜಮೀನು ವಶಕ್ಕೆ ಪಡೆದು ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಿಡಲಾಗಿದೆ ಎಂದು ಹೇಳಿದರು.

ಡಿಜಿಟಲೀಕರಣ ಮತ್ತು ನಾಗರಿಕ ಸೇವೆ:

            ಜಿಲ್ಲೆಯಲ್ಲಿ ‘ಭೂ ಸುರಕ್ಷಾ’ ಅಡಿ 2.90 ಕೋಟಿ ಪುಟಗಳ ದಾಖಲೆಗಳ ಡಿಜಿಟಲೀಕರಣ ಮಾಡಲಾಗಿದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂಗವಾಗಿ ಮನೆಬಾಗಿಲಿಗೆ ಜಾತಿ ಪ್ರಮಾಣ ಪತ್ರ ವಿತರಣೆ ಮೂಲಕ ಬಳ್ಳಾರಿಯಲ್ಲಿ ಶೇ. 80ರಷ್ಟು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.

            ರಾಷ್ಟ್ರೀಯ ಐಕ್ಯತೆಯನ್ನು ಕಾಪಾಡುವಂತಹ ಕಾರ್ಯಗಳಲ್ಲಿ ದುಷ್ಠಶಕ್ತಿಗಳ ದಮನಕ್ಕೆ ಹಾಗೂ ರಾಷ್ಟ್ರೀಯ ರಕ್ಷಣೆಗೆ, ದೇಶದ ಸಮಗ್ರತೆಗೆ ಎಲ್ಲರೂ ಒಟ್ಟಾಗಿ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕರೆ ನೀಡಿದರು.

            ಸಮಾರಂಭದಲ್ಲಿ ಜಿಲ್ಲೆಯಲ್ಲಿ ಕ್ರೀಡೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಿ ಗೌರವಿಸಲಾಯಿತು.

news_1786791515_5_515.webp

 

ಶಿಸ್ತಿನ ಪಥಸಂಚಲನ, ರಂಗುರಂಗಿನ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಸಂಭ್ರಮ:

            ನಗರದ ಬಿಎಂಸಿಆರ್‌ಸಿ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಕರ್ಷಕ ಪಥಸಂಚಲನ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಕಣ್ಮನ ಸೆಳೆದವು.

            ಪ್ರಮುಖ ಆಕರ್ಷಣೆಯಾಗಿ ಪೊಲೀಸ್ ಪಡೆ, ಗೃಹರಕ್ಷಕ ದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿ ತಂಡಗಳಿಂದ ಶಿಸ್ತುಬದ್ಧ ಪಥಸಂಚಲನ ಜರುಗಿತು.     ನಂತರ ವಿವಿಧ ಶಾಲಾ ಮಕ್ಕಳಿಂದ ನಡೆದ ವೈವಿಧ್ಯಮಯ ನೃತ್ಯ ಮತ್ತು ಪ್ರದರ್ಶನಗಳು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿದವು. ಪಥಸಂಚಲನ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಿ ಗೌರವಿಸಲಾಯಿತು.

            ಬಳಿಕ ಸಚಿವರು, ಮಹಾನಗರ ಪಾಲಿಕೆಯ 46 ಕಸ ಸಂಗ್ರಹಣೆ ವಾಹನಗಳನ್ನು ಲೋಕಾರ್ಪಣೆ ಮಾಡಿದರು.

news_1786791516_1_150.webp

 

           

 ಈ ಸಂದರ್ಭದಲ್ಲಿ ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ- ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಇದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ