LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ವದ್ದಟ್ಟಿ ಗ್ರಾಮದಲ್ಲಿ ಜಿಪಂ ಸಿಇಒ ಭೇಟಿ

ಬಳ್ಳಾರಿ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು, ಬುಧವಾರ ಕುರುಗೋಡು ತಾಲೂಕಿನ ಯರಂಗಳಿಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವದ್ದಟ್ಟಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಉದ್ಯೋಗ ಖಾತ್ರಿ (ವಿಬಿ-ಜಿ ರಾಮ್ -ಜಿ) ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ನೇರವಾಗಿ ಪರಿಶೀಲಿಸಿದರು.

                ಸ್ಥಳದಲ್ಲಿದ್ದ ಕೂಲಿಕಾರರೊಂದಿಗೆ ನೇರ ಸಂವಾದ ನಡೆಸಿದ ಸಿಇಒ ಅವರು, ಕೆಲಸದ ಸಮಯ, ಹಾಜರಾತಿ ಹಾಗೂ ಯೋಜನೆಯಡಿ ದಿನವೊಂದಕ್ಕೆ ದೊರೆಯುತ್ತಿರುವ ಕೂಲಿ ಮೊತ್ತದ ವಿವರಗಳನ್ನು ಕೂಲಿಕಾರರಿಂದಲೇ ಪಡೆದುಕೊಂಡರು.

ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಲು ಸೂಚನೆ:

                ಸ್ಥಳದಲ್ಲಿದ್ದ ಕಾಯಕ ಬಂಧುಗಳಿಗೆ ನಿರ್ದೇಶನ ನೀಡಿದ ಅವರು, ಹೊಸದಾಗಿ ಕೃಷಿಯೇತರ ಚಟುವಟಿಕೆಗಳಿಗೆ ಅನುಗುಣವಾಗಿ ಸೂಕ್ತ ಕಾಮಗಾರಿಗಳ ಪಟ್ಟಿಯನ್ನು ತಕ್ಷಣ ಸಿದ್ಧಪಡಿಸಬೇಕು ಎಂದು ತಿಳಿಸಿದರು.

                ಪ್ರತಿಯೊಂದು ಕುಟುಂಬಕ್ಕೂ ಆರ್ಥಿಕ ಭದ್ರತೆ ಸಿಗುವಂತಾಗಲು ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ ಹಾಗೂ ಕುರಿ/ಕೋಳಿ ಶೆಡ್ಡುಗಳು, ಕೃಷಿ ಹೊಂಡ ಹಾಗೂ ಸೋಕ್ ಪಿಟ್ (ಇಂಗು ಗುಂಡಿ), ಎರೆಹುಳು ಗೊಬ್ಬರ ತೊಟ್ಟಿ ಮತ್ತು ಅಜೋಲ ಘಟಕಗಳ ನಿರ್ಮಾಣಕ್ಕೆ ಹೆಚ್ಚಿನ ಆಧ್ಯತೆ ನೀಡಿ ಕೆಲಸ ಪ್ರಾರಂಭಿಸಲು ಸೂಚಿಸಿದರು.

news_1784741131_5_283.webp

 

ಪದವೀಧರ ಕೂಲಿಕಾರರೊಂದಿಗೆ ವಿಶೇಷ ಸಂವಾದ:

                ಪರಿಶೀಲನೆ ವೇಳೆ ಯೋಜನೆಯಡಿಯಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದ ಬಿ.. ಪದವೀಧರ ವಿದ್ಯಾರ್ಥಿಗಳೊಂದಿಗೆ ಜಿಪ್ಮಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ವಿಶೇಷ ಸಂವಾದ ನಡೆಸಿ, ಅವರ ಶ್ರಮದಾನವನ್ನು ಶ್ಲಾಘಿಸಿದರು.

                ಸಂದರ್ಭದಲ್ಲಿ ಕುರುಗೋಡು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಹಿರೇಮಠ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಶ್ರೀರಾಮ ರೆಡ್ಡಿ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ರೇಣುಕಾ ಸ್ವಾಮಿ, ಯರಂಗಳಿಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಶುರಾಮ್,  ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ್, ..ಸಿ ಸಂಯೋಜಕ ಚಂದ್ರಶೇಖರ್, ತಾಂತ್ರಿಕ ಸಹಾಯಕಿ ಅರುಣಜ್ಯೋತಿ ಮತ್ತು ಬಿಎಫ್ಟಿ ಆಗಲೂರಪ್ಪ ಸೇರಿದಂತೆ ಗ್ರಾಮ ಕಾಯಕ ಮಿತ್ರರು, ಕಾಯಕ ಬಂಧುಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ