LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Bangalore | State News

ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್, ಸಭಾಪತಿಯಾಗಿ ಸಲೀಂ ಅಹ್ಮದ್ ಅವಿರೋಧ ಆಯ್ಕೆ

ಶುಕ್ರವಾರ ಸದನದಲ್ಲಿ ಘೋಷಣೆ

ಬೆಂಗಳೂರು : ರಾಜ್ಯ ವಿಧಾನಮಂಡಲದ ಎರಡು ಪ್ರಮುಖ ಸ್ಥಾನಗಳಾದ ವಿಧಾನಸಭೆಯ ಸಭಾಧ್ಯಕ್ಷ ಮತ್ತು ವಿಧಾನ ಪರಿಷತ್‌ನ , ಸಭಾಪತಿ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದ್ದು, ಆಡಳಿತರೂಢ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ.

ಪ್ರತಿಪಕ್ಷಗಳಿಂದ ಯಾರೂ ಕಣಕ್ಕಿಳಿಯದ ಕಾರಣ ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್, ಸಭಾಪತಿಯಾಗಿ ಸಲೀಂ ಅಹ್ಮದ್ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಶುಕ್ರವಾರ ಸದನದಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.

ಸಭಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ , ಜಿ.ಎಸ್.ಪಾಟೀಲ್ ಅವರು, ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರಗಳನ್ನು ಸಲ್ಲಿಸಿದರು.

ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ, ಸಲೀಂ ಅಹ್ಮದ್ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಇತರೆ ಸಚಿವರು, ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

news_1786641374_7_364.webp

 

ಎರಡೂ ಸದನಗಳಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತವನ್ನು ಹೊಂದಿದೆ. ಹೀಗಾಗಿ, ಈ ಸ್ಥಾನಗಳನ್ನು ತನ್ನ ವಶಕ್ಕೆ ಪಡೆಯಲಿವೆ. 

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು, ಈ ಚುನಾವಣೆಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ , ಈ ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ.

ಶುಕ್ರವಾರ ವಿಧಾನಸಭೆಯಲ್ಲಿ ಹಂಗಾಮಿ ಸಭಾಧ್ಯಕ್ಷ ಟಿ.ಬಿ. ಜಯಚಂದ್ರ ಹಾಗೂ ಪರಿಷತ್ತಿನಲ್ಲಿ ಹಂಗಾಮಿ ಸಭಾಪತಿ ಪುಟ್ಟಣ್ಣ ಅವರು ನೂತನ ಪೀಠಸೀನಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಲಿದ್ದಾರೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ