ಮರಿಯಮ್ಮನಹಳ್ಳಿ : ಪಟ್ಟಣ ಸಮೀಪದ ಜಿ.ನಾಗಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಂಡಾ ಗ್ರಾಮದದಲ್ಲಿ ವಿಬಿಜಿ ರಾಮ್ ಜಿ "(VB-G Ram-G) ಯೋಜನೆಯಡಿಯಲ್ಲಿ ಕೂಲಿ ಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆ ಹಾಗೂ ಚಿಕಿತ್ಸೆ ನೀಡಿದರು. ಗುಂಡಾ ಗ್ರಾಮದ ಸುಮಾರು 102 ಜನ ಕೂಲಿ ಕಾರ್ಮಿಕರು ಭಾಗವಹಿಸಿ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಪಡೆದುಕೊಂಡರು
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವೈದ್ಯರಾದ ಡಾ. ರಾಧಾಕೃಷ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನವೀನ್, ಫಾರ್ಮಸಿ ಅಧಿಕಾರಿ ಜೇಷ್ಠ, ಆರೋಗ್ಯ ನಿರೀಕ್ಷಣಾಧಿಕಾರಿ ಅನಿಲ್, ಸದ್ದಾಂ ಹುಸೇನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇಣುಕಮ್ಮ, ಸಿ.ಹೆಚ್.ಓ ನಾಗರತ್ನ ಹಾಗೂ ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಪಿಡಿಒ ಜಿಲಾನ್ ಹಾಗೂ ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.