LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Raichur

ಗೋಮರ್ಸಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ

ಅಬಕಾರಿ ಇಲಾಖೆಯ ಅಧಿಕಾರಿಗಳ ಪರಿಶೀಲನೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಸಿಂಧನೂರು :  ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದ ಅಕ್ರಮ ಮದ್ಯ ಮಾರಾಟದ ಕುರಿತು ಅಬಕಾರಿ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.

ಗ್ರಾಮದ ವಿವಿಧ ಪ್ರದೇಶಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

 

ಪತ್ರಿಕಾ ಪ್ರಕಟಣೆ ನೀಡಿದ ನಿರುಪಾದಿ ಕೆ ಗೋಮರ್ಸಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಯುವಜನತೆ,ಮಹಿಳೆಯರು ಹಾಗೂ ಕುಟುಂಬಗಳ ಸಾಮಾಜಿಕ ಮತ್ತು ಆರ್ಥಿಕ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ,ಈ ಅಕ್ರಮವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಅತ್ಯಗತ್ಯವಾಗಿದೆ.ಆದ್ದರಿಂದ ಅಬಕಾರಿ ಇಲಾಖೆ ನಿರಂತರ ದಾಳಿ ನಡೆಸಿ,ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಜರುಗಿಸಬೇಕು.

ಅಧಿಕಾರಿಗಳ ಈ ಪರಿಶೀಲನೆ ಕೇವಲ ಔಪಚಾರಿಕತೆಯಾಗದೆ, ಶಾಶ್ವತ ಪರಿಹಾರಕ್ಕೆ ದಾರಿ ಮಾಡಿಕೊಡಬೇಕು. ಗ್ರಾಮದಲ್ಲಿ ಮತ್ತೆ ಅಕ್ರಮ ಮದ್ಯ ಮಾರಾಟ ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಿಸಿ, ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಆರೋಗ್ಯಕರ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸುತ್ತೇನೆ.

ಸಾರ್ವಜನಿಕರು ಸಹ ಅಕ್ರಮ ಚಟುವಟಿಕೆಗಳ ಬಗ್ಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿ, ಕಾನೂನು ಪಾಲನೆಗೆ ಸಹಕರಿಸುವಂತೆ ವಿನಂತಿಸುತ್ತೇನೆ ಎಂದು ತಿಳಿಸಿದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಬಳ್ಳಾರಿಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ ಕೆ ಶಿವಕುಮಾರ್ ಒತ್ತಾಯಯಾರಿಗೆ ಒಲೆಯುತ್ತೆ ಬಿಜೆಪಿ ಟಿಕೆಟ್ ರಾಜೀವ್ ಗಾಂಧಿ ಹಾದಿಯಲ್ಲಿ ರಾಹುಲ್ ಗಾಂಧಿ