22 Nov 2026, 06:19:27 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
LIVE TV StateNationalPoliticsCrimeEntertainmentSportsEducationFINANCE & TAXATION
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts

ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

ಬಳ್ಳಾರಿ :  ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣ ಪ್ರಕಾಶ ಆರ್.ಪಾಟೀಲ ಅವರು ಹೇಳಿದರು.

 

ನಗರದ ಸುಧಾಕ್ರಾಸ್ ಬಳಿಯ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ, ಬಾಕಿ ಕಾಮಗಾರಿಗಳ ಕುರಿತು ವೈದ್ಯಾಧಿಕಾರಿಗಳೊಂದಿಗೆ ಸಭೆ ಜರುಗಿಸಿ ಅವರು ಮಾತನಾಡಿದರು.

 

450 ಹಾಸಿಗೆಯುಳ್ಳ ಈ ಆಸ್ಪತ್ರೆಯು 2008 ರಲ್ಲಿ ಮಂಜೂರಾಗಿತ್ತು. ವಿವಿಧ ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದ ಆಸ್ಪತ್ರೆಯನ್ನು 2018 ರಲ್ಲಿ ಮರು ಟೆಂಡರ್ ಕರೆಯಲಾಗಿತ್ತು. ಈಗ ನಮ್ಮ ಸರ್ಕಾರಾವಧಿಯಲ್ಲೇ ಪೂರ್ಣಗೊಳಿಸಿ ಡಿಸೆಂಬರ್ ತಿಂಗಳಲ್ಲಿ ಉದ್ಘಾಟನೆಗೊಳಿಸಿ ಸಾರ್ವಜನಿಕರಿಗೆ ಅರ್ಪಿಸಲಾಗುವುದು ಎಂದರು.



11204 ಲಕ್ಷ ಮೊತ್ತದ ಮೊದಲ ಹಂತ-1 ದ ಕಾಮಗಾರಿ ಶೇ.97 ರಷ್ಟು ಪೂರ್ಣಗೊಂಡಿದೆ. 2438 ಲಕ್ಷದ ಎರಡನೇ ಹಂತದ ಕಾಮಗಾರಿಗಳೂ ಸಹ ಶೇ.96 ರಷ್ಟು ಮುಗಿದಿದ್ದು, ಈ ತಿಂಗಳ ಕೊನೆಯ ಹಂತದಲ್ಲಿ ವಿದ್ಯುತ್ ಕಾಮಗಾರಿ ಸೇರಿದಂತೆ ಬಾಕಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

 

ಕಾರ್ಡಿಯಾಲಜಿ, ಪ್ಲಾಸ್ಟಿಕ್ ಸರ್ಜರಿ, ಡಯಾಲಿಸಿಸ್ ಯಂತ್ರ, ಆರ್ಒ ಪ್ಲಾಂಟ್, ಬೆಡ್ ವ್ಯವಸ್ಥೆ ಹಾಗೂ ಇತರೆ ಸಾಮಾಗ್ರಿ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ ಜನರಿಗೆ ಉಪಯುಕ್ತ ಆರೋಗ್ಯ ಸೇವೆ ನೀಡಲು ಮುಂದಾಗಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

 

ನ್ಯೂರಾಲಜಿ ಸೇರಿದಂತೆ ಆಸ್ಪತ್ರೆಯಲ್ಲಿ ಖಾಲಿಯಿರುವ ವಿವಿಧ ವಿಭಾಗಗಳ ವೈದ್ಯರು ಮತ್ತು ಗ್ರೂಪ್-ಬಿ, ಸಿ ಹುದ್ದೆಗಳನ್ನು ಗುತ್ತಿಗೆ ಆಧಾರದಡಿ ಪಡೆಯಲು ಕೂಡಲೇ ಕ್ರಮವಹಿಸಬೇಕು ಎಂದು ನಿರ್ದೇಶಕರಿಗೆ ಸೂಚನೆ ನೀಡಿದರು.

 

ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಆಸ್ಪತ್ರೆಯು, ಅನುದಾನದ ಕೊರತೆಯಾದಲ್ಲಿ ಡಿಎಂಎಫ್, ಕೆಎಂಇಆರ್ಸಿ ಹಾಗೂ ಸಿಎಸ್ಆರ್ ಅನುದಾನಕ್ಕಾಗಿ ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು ಎಂದರು.



ಕಳೆದ 2 ತಿಂಗಳುಗಳಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗ ಕಾರ್ಯನಿರ್ವಹಿಸುತ್ತಿದೆ. ಇನ್ನೊಂದು ತಿಂಗಳಲ್ಲಿ ಒಳರೋಗಿ ವಿಭಾಗ ಆರಂಭಿಸಲಾಗುವುದು ಎಂದು

ಬಿಎಂಸಿಆರ್ ಸಿ ನಿರ್ದೇಶಕ ಡಾ.ಗಂಗಾಧರ ಗೌಡ ಅವರು ಸಚಿವರ ಗಮನಕ್ಕೆ ತಂದರು.

 

ವಿದ್ಯುತ್ ಪೂರೈಕೆಯ ಪರಿವರ್ತಕ ಅಳವಡಿಕೆ ಕಾರ್ಯ, ವಿವಿಧ ಅಗತ್ಯ ಸಾಮಾಗ್ರಿ-ಸಲಕರಣೆ ಪೂರೈಕೆ ಬಾಕಿಇದ್ದು, ಉಳಿದಂತೆ ಎಲ್ಲಾ ಕಾರ್ಯ ಮುಗಿದಿದ್ದು, ನವೆಂಬರ್ ತಿಂಗಳ ಅಂತ್ಯಕ್ಕೆ ಎಲ್ಲಾ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಅಗತ್ಯ ಸೌಲಭ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ಲಭ್ಯವಾಗಲಿದೆ ಎಂದು ಸಭೆಗೆ ತಿಳಿದರು.

 

ಸಭೆಯಲ್ಲಿ ಬಿಎಂಸಿಆರ್ ಸಿ, ಟಿಬಿ ಆಸ್ಪತ್ರೆಗಳಲ್ಲಿ ಕೆಎಂಇಆರ್ ಸಿ ಯೋಜನೆಯಡಿ ಕೈಗೊಂಡ  ವಿವಿಧ ಕಾಮಗಾರಿಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರಲ್ಲದೇ, ಇದೇ ವೇಳೆ ಅಗತ್ಯ ಸಲಹೆ ಸೂಚನೆ ನೀಡಿದರು.



26 ಎಕರೆ ಪ್ರದೇಶದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ:

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಗುರುತಿಸಿದ 26 ಎಕರೆ ಪ್ರದೇಶದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಡಿಪಿಆರ್ ಸಿದ್ಧವಿದ್ದು, ಸಮಿತಿಯಲ್ಲಿ ಅನುಮೋದನೆಗೊಂಡರೆ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ಮಾಧ್ಯಮದವರಿಗೆ ತಿಳಿಸಿದರು.

 

ಬಳಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮುಸೇನ್, ಬೆಂಗಳೂರು ವೈದ್ಯಕೀಯ ನಿರ್ದೇಶನಾಲಯದ ನಿರ್ದೇಶಕಿ ಸುಜಾತ ರಾಠೋಡ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೇರ್ ಸೇರಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರು, ಪ್ರಾಂಶುಪಾಲರು, ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ