LIVE TV StateNationalPoliticsCrimeEntertainmentSportsEducationFINANCE & TAXATION
State News

ಶ್ರೀನಿವಾಸನಗರದಲ್ಲಿ ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಕಚೇರಿ ಉದ್ಘಾಟನೆ

ಬೆಂಗಳೂರು: ಶ್ರೀನಿವಾಸನಗರದಲ್ಲಿ ನೂತನವಾಗಿ ನಿರ್ಮಿಸಲಾದ ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನೂತನ ಆಡಳಿತ ಕಚೇರಿಯನ್ನು ಹಲವು ಗಣ್ಯರ ಸಮ್ಮುಖದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಶುಭಾರಂಭ ಮಾಡಲಾಯಿತು.

 

ಬಸವನಗುಡಿ ಕ್ಷೇತ್ರದ ಮಾನ್ಯ ಶಾಸಕ ಎಲ್. . ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯರಾದ ಡಾ. ಟಿ. . ಶರವಣ, ಸಹಕಾರ ಇಲಾಖೆಯ ನಿ. ಪ್ರಧಾನ ಕಾರ್ಯದರ್ಶಿಗಳಾದ ಡಾ. ಸಿ. ಸೋಮಶೇಖರ್ (..ಎಸ್), ಸಹಕಾರ ಇಲಾಖೆಯ ಸಹಾಯಕ ನಿಬಂಧಕ ಎಚ್. ಬಾಲಶೇಖರ್, ಜೆಡಿಎಸ್ ಹಿರಿಯ ಮುಖಂಡ ಕೆ. ಬಾಗೇಗೌಡ ಹಾಗೂ ಗ್ರೇಟರ್ ಬೆಂಗಳೂರು ಪಶ್ಚಿಮ ವಲಯದ ಅಧ್ಯಕ್ಷರಾದ ತಿಮ್ಮೇಗೌಡ ಅವರು ಜ್ಯೋತಿ ಬೆಳಗಿಸುವ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

 

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ 'ಸಹಕಾರ ರತ್ನ' ಡಾ. ಬಿ. ಎಂ. ಉಮೇಶ್ಕುಮಾರ್ ಅವರು, "ಸಂಘವು ಪಾರದರ್ಶಕ, ವಿಶ್ವಾಸಾರ್ಹ ಹಾಗೂ ಸದಸ್ಯ-ಸ್ನೇಹಿ ಆರ್ಥಿಕ ಸೇವೆಗಳನ್ನು ಒದಗಿಸುವ ಮೂಲಕ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ದೃಢವಾದ ಗುರಿಯನ್ನು ಹೊಂದಿದೆ," ಎಂದು ತಮ್ಮ ಆಶಯವನ್ನು ವ್ಯಕ್ತಪಡಿಸಿದರು.

 

ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ. ಎಸ್. ಎನ್. ಇಂದ್ರೇಶ್, ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರುಗಳಾದ  ಪದ್ಮನಾಭ ಎಸ್.,  ಸಂಜಯ್ ಜಗದೀಶ್, ಡಾ. ರವಿ ಎಸ್.,  ವೆಂಕಟೇಶಮೂರ್ತಿ, ಡಾ. ಎಂ. . ಹಿರೇಮಠ್ ಮತ್ತು ಶ್ರೀಮತಿ ವಿಂಧ್ಯಾ ಅನಿಲ್ ಉಪಸ್ಥಿತರಿದ್ದರು.

news_1782839814_6_802.webp

 

ಸಂಘದ ಸದಸ್ಯರು, ಗ್ರಾಹಕರು, ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

ಸಂಘವು ಎಲ್ಲಾ ಪ್ರಕಾರದ ಬ್ಯಾಂಕಿಂಗ್ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ